ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 19 ಏಪ್ರಿಲ್ 2020
ಲಾಕ್ಡೌನ್ ಆದೇಶ ಉಲ್ಲಂಘನೆ ಮಾಡಿ ಫ್ಯಾನ್ಸಿ ಸ್ಟೋರ್, ಬುಕ್ ಶಾಪ್ ಮತ್ತು ಚಪ್ಪಲಿ ಅಂಗಡಿಗಳನ್ನು ತೆರೆದು ವ್ಯಾಪಾರ ಮಾಡುತ್ತಿದ್ದ ವ್ಯಕ್ತಿಗಳ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜೈಲ್ ರಸ್ತೆಯ ಫ್ಯಾನ್ಸಿ ಸ್ಟೋರ್ ಮತ್ತು ಬುಕ್ ಶಾಪ್ ಮಾಲೀಕ ಸುರೇಶ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಇನ್ನು ತಿಲಕನಗರದ ಮುಖ್ಯ ರಸ್ತೆಯಲ್ಲಿರುವ ಚಪ್ಪಲಿ ಅಂಗಡಿ ಮಾಲೀಕ ರಾಘವೇಂದ್ರ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.
ಲಾಕ್ಡೌನ್ ಆದೇಶ ಉಲ್ಲಂಘನೆ ಮಾಡಿ, ಅನುಮತಿಯೇ ಇಲ್ಲದೆ ಅಂಗಡಿ ತೆರೆದಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಜನರನ್ನು ಗುಂಪು ಸೇರಿಸಿಕೊಂಡು ಮಾರಾಟ ಮಾಡುತ್ತಿದ್ದರಿಂದ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಸ್ವಾಮಿ ಶರಾವತಿ ನಗರದ ಕೆಲವೆಡೆ ಪಡ್ಡೆ ಹುಡುಗರು ಈಗಲೂ ಕ್ರಿಕೆಟ್ ಆಡುತ್ತಿರುತ್ತಾರೆ ದಯಮಾಡಿ ಸಂಬಂಧಪಟ್ಟವರು ಇವರಿಗೆ ಬುದ್ದಿ ಹೇಳಿದರೆ ಒಳ್ಳೆಯದು
9480803301 (Shivamogga SP) Please complain to this number