ಶಿವಮೊಗ್ಗ : ಒಂದು ಲಕ್ಷ ರೂ. ಲಂಚ (Bribe) ಪಡೆಯುತ್ತಿದ್ದ ಸಂದರ್ಭ ಸ್ಮಾರ್ಟ್ ಸಿಟಿ ಯೋಜನೆಯ ಪ್ರಭಾರ ಚೀಫ್ ಇಂಜಿನಿಯರ್ ಕೃಷ್ಣಪ್ಪ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 11 ಲಕ್ಷ ರೂ. ಮೊತ್ತದ ಬಿಲ್ ಪಾವತಿಗೆ ಕೃಷ್ಣಪ್ಪ ಒಂದು ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇವತ್ತು ಹಣ ಪಡೆಯುವ ಸಂದರ್ಭ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಎಕ್ಸ್‌ಟ್ರೀಮ್ ಮೀಡಿಯಾ ಸಂಸ್ಥೆಯ ಎಕ್ಸಿಕ್ಯೂಟಿವ್ ಸೈಟ್ ಇಂಜಿನಿಯರ್ ಪವನ್ ಅವರಿಂದ ಸ್ಮಾರ್ಟ್ ಸಿಟಿಯ ಪ್ರಭಾರ ಚೀಪ್ ಇಂಜಿನಿಯರ್ ಕೃಷ್ಣಪ್ಪ ಒಂದು ಲಕ್ಷ ರೂ. ಲಂಚ (Bribe) ಸ್ವೀಕರಿಸುತ್ತಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
11 ಲಕ್ಷದ ಬಿಲ್ ಬಾಕಿ ಇತ್ತು
ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆ ವತಿಯಿಂದ 7 ಡಿಜಿಟಲ್ ಡಿಸ್ಪ್ಲೆ ಬೋರ್ಡುಗಳನ್ನು ಅಳವಡಿಸಲಾಗಿದೆ. ಎಕ್ಸ್‌ಟ್ರೀಮ್ ಮೀಡಿಯಾ ಸಂಸ್ಥೆಯೆ ಇದರ ನಿರ್ವಹಣೆ ಮಾಡುತ್ತಿದೆ. ಕಳೆದ ಎರಡು ತ್ರೈಮಾಸಿಕದ 11.16 ಲಕ್ಷ ರೂ. ಮೊತ್ತದ ಬಿಲ್ ಬಾಕಿ ಇತ್ತು. ಇದನ್ನು ಮಂಜೂರು ಮಾಡಲು ಪ್ರಭಾರ ಚೀಫ್ ಇಂಜಿನಿಯರ್ ಕೃಷ್ಣಪ್ಪ ಒಂದು ಲಕ್ಷ ರೂ. ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆ ಸೈಟ್ ಇಂಜಿನಿಯರ್ ಪವನ್ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು.

ಇವತ್ತು ನೆಹರು ರಸ್ತೆಯಲ್ಲಿರುವ ಸ್ಮಾರ್ಟ್ ಸಿಟಿ ಯೋಜನೆ ಕಚೇರಿ ಮುಂಭಾಗದ ಆವರಣದಲ್ಲಿ ಒಂದು ಲಕ್ಷ ರೂ. ಪಡೆಯುವಾಗ (Bribe) ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರಭಾರ ಚೀಫ್ ಇಂಜಿನಿಯರ್ ಕೃಷ್ಣಪ್ಪ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ » ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ ಗೌಡ ಅರೆಸ್ಟ್
ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಮಂಜುನಾಥ ಚೌಧರಿ ಮಾರ್ಗದರ್ಶನದಲ್ಲಿ, ಉಪಾಧೀಕ್ಷಕ ಬಿ.ಪಿ.ಚಂದ್ರಶೇಖರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಇನ್ಸ್‌ಪೆಕ್ಟರ್ ವೀರಬಸಪ್ಪ ಎಲ್.ಕುಸಲಾಪುರ, ಸಿಬ್ಬಂದಿ ಯೋಗೇಶ್.ಜಿ.ಸಿ, ಟೀಕಪ್ಪ, ಮಂಜುನಾಥ್, ಸುರೇಂದ್ರ, ಪ್ರಶಾಂತ್ ಕುಮಾರ್, ಬಿ.ಟಿ.ಚನ್ನೇಶ್, ದೇವರಾಜ್, ಅರುಣ್ ಕುಮಾರ್, ಪ್ರಕಾಶ್ ಬಾರಿಮರದ, ಆದರ್ಶ, ಚಂದ್ರಿಬಾಯಿ, ಪ್ರದೀಪ್, ಗೋಪಿ, ಜಯಂತ್, ತರುಣ್ ಕುಮಾರ್, ಗಂಗಾಧರ್, ಆನಂದ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200