SHIVAMOGGA LIVE | 31 MAY 2023
SHIMOGA : ಜಿಲ್ಲೆಯ ಇಬ್ಬರು ಇಂಜಿನಿಯರ್ಗಳ ಮನೆ, ಕಚೇರಿ, ತೋಟದ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ (Lokayukta Raid) ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಒಟ್ಟು 8 ಕಡೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.
ಯಾರೆಲ್ಲರ ಮೇಲೆ ದಾಳಿಯಾಗಿದೆ?
ತುಂಗಾ ಮೇಲ್ದಂಡೆ ಯೋಜನೆಯ ಮುಖ್ಯ ಇಂಜನಿಯರ್ ಪ್ರಶಾಂತ್ ಅವರ ಮನೆ, ತೋಟದ ಮನೆ, ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಪ್ರಶಾಂತ್ ಅವರಿಗೆ ಸಂಬಂಧಿಸಿದಂತೆ ಒಟ್ಟು 5 ಕಡೆ ಪರಿಶೀಲನೆ ನಡೆಯುತ್ತಿದೆ. ಶಿವಮೊಗ್ಗದ ಹೊಸಮನೆ ಬಡಾವಣೆಯ 3ನೇ ಮುಖ್ಯ ರಸ್ತೆಯ ಕೆ.ಹೆಚ್.ಬಿ. ಕಾಲೋನಿಯ ಮನೆ, ಭದ್ರಾವತಿ ತಾಲೂಕು ಶೆಟ್ಟಿಹಳ್ಳಿಯ ತೋಟದ ಮನೆಯಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇನ್ನು, ಶರಾವತಿ ನಗರದಲ್ಲಿರುವ ಪ್ರಶಾಂತ್ ಅವರ ಪತ್ನಿಯ ಸಹೋದರ ನಾಗೇಶ್ ಎಂಬುವವರ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ (Lokayukta Raid) ಮಾಡಿದ್ದಾರೆ.
ಜಿಲ್ಲಾ ಪಂಚಾಯಿತಿ ಜೂನಿಯರ್ ಇಂಜಿನಿಯರ್ ಶಂಕರ ನಾಯ್ಕ್ ಅವರ ಮನೆ ಮೇಲೆಯೂ ದಾಳಿಯಾಗಿದೆ. ಶಂಕರ್ ನಾಯ್ಕ್ ಅವರಿಗೆ ಸಂಬಂಧಿಸಿದ ಮೂರು ಕಡೆಗಳಲ್ಲಿ ದಾಳಿ ಮಾಡಲಾಗಿದೆ.
ಇದನ್ನೂ ಓದಿ – ನಾಡ ಕಚೇರಿಗೆ ಎಂಎಲ್ಎ ದಿಢೀರ್ ಭೇಟಿ, ಉಪ ತಹಶೀಲ್ದಾರ್ಗೆ ಖಡಕ್ ಸೂಚನೆ
ಲೋಕಾಯುಕ್ತ ಚಿತ್ರದುರ್ಗ ಎಸ್.ಪಿ ವಾಸುದೇವರಾಮ್ ಅವರ ನೇತೃತ್ವದಲ್ಲಿ ಜಿಲ್ಲೆಯ ಎಂಟು ಕಡೆ ದಾಳಿ ಮಾಡಲಾಗಿದೆ. ಶಿವಮೊಗ್ಗ ಲೋಕಾಯುಕ್ತ ಡಿವೈಎಸ್ಪಿ ಉಮೇಶ ಈಶ್ವರ್ ನಾಯಕ್, ಲೋಕಾಯುಕ್ತ ಇನ್ಸ್ಪೆಕ್ಟರ್ ಮೃತ್ಯುಂಜಯ ಮತ್ತು ಸಿಬ್ಬಂದಿ ದಾಳಿಯಲ್ಲಿ ಭಾಗವಹಿಸಿದ್ದಾರೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ