ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 22 JULY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
LOKAYUKTA RAID : ಶಿವಮೊಗ್ಗದಲ್ಲಿ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಪ್ರಕಾಶ್.ಜಿ.ಎನ್. ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಪ್ರಕರಣ ದಾಖಲು ಮಾಡಿಕೊಂಡು ಮೂರು ಕಡೆ ದಾಳಿ ನಡೆಸಿ ಪರಿಶೀಸಲಿದ್ದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಎರಡು ಕೋಟಿ ಅಕ್ರಮ ಆಸ್ತಿ
ಎರಡು ದಿನ ದಾಳಿ ಮತ್ತು ಪರಿಶೀಲನೆ ವೇಳೆ ಅಂದಾಜು ಎರಡು ಕೋಟಿ ರೂ. ಅಕ್ರಮ ಆಸ್ತಿ ಸಂಪಾದಿಸಿರುವುದು ಬೆಳಕಿಗೆ ಬಂದಿದೆ ಎಂದು ಲೋಕಾಯುಕ್ತ ಇಲಾಖೆ ಪ್ರಕಟಣೆ ಮೂಲಕ ತಿಳಿಸಿದೆ. ದಾಳಿ ವೇಳೆ ಸಿಕ್ಕ 44 ಲಕ್ಷ ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ.
ದಾಳಿಯ ಮೊದಲ ದಿನ ಸಿಕ್ಕಿದ್ದು
ದಾಳಿ ವೇಳೆ ಉಪ ನಿರ್ದೇಶಕ ಪ್ರಕಾಶ್‌ಗೆ ಸಂಬಂಧಿಸಿದ 1 ಖಾಲಿ ನಿವೇಶನ, 2 ಮನೆಗಳು, 2.8 ಎಕರೆ ಕೃಷಿ ಜಮೀನು ಪತ್ತೆಯಾಗಿದೆ. ಇದರ ಅಂದಾಜು ಮೌಲ್ಯ 1.57 ಕೋಟಿ ರೂ. ಇನ್ನು, ವಾಸದ ಮನೆಯಲ್ಲಿ 38.32 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಪತ್ತೆಯಾಗಿದ್ದವು. 5.20 ಲಕ್ಷ ಮೌಲ್ಯದ ವಾಹನಗಳು, 11.30 ಲಕ್ಷ ರೂ. ಮೌಲ್ಯದ ಗೃಹಪಯೋಗಿ ವಸ್ತುಗಳು ಮತ್ತು ರೂ 12.86 ಲಕ್ಷ ರೂ. ನಗದು ಹಣ ಪತ್ತೆಯಾಗಿತ್ತು ಎಂದು ತಿಳಿಸಲಾಗಿದೆ.
ದಾಳಿಯ ಎರಡನೇ ದಿನ ಲಾಕರ್‌ಗಳು ಓಪನ್
ಜು.20ರಂದು ಪ್ರಕಾಶ್ ಜಿ.ಎನ್ ಪತ್ನಿ ಹೆಸರಿನಲ್ಲಿದ್ದ ಬ್ಯಾಂಕ್ ಲಾಕರ್ ಪರಿಶೀಲಿಸಲಾಯಿತು. 32.06 ಲಕ್ಷ ರೂ. ನಗದು, 18.48 ಲಕ್ಷ ರೂ. ಚಿನ್ನಾಭರಣ ಪತ್ತೆಯಾಗಿದೆ.
ಲೋಕಾಯುಕ್ತ ಶಿವಮೊಗ್ಗದ ಪೊಲೀಸ್ ಅಧೀಕ್ಷಕ ಮಂಜುನಾಥ್ ಚೌದರಿ ಪ್ರಕರಣ ದಾಖಲಿಸಿದ್ದಾರೆ. ಲೋಕಾಯುಕ್ತ ಪೊಲೀಸ್ ನಿರೀಕ್ಷಕ ಹೆಚ್.ಎಸ್.ಸುರೇಶ್ ತನಿಖೆ ಮುಂದುವರೆಸಿದ್ದಾರೆ. ಶಿವಮೊಗ್ಗ, ಹಾವೇರಿಯ ಲೋಕಾಯುಕ್ತ ಪೊಲೀಸರು ದಾಳಿಯಲ್ಲಿ ಭಾಗವಹಿಸಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.