ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ, ಲಂಚ ಪಡೆಯುತ್ತಿದ್ದ ಅಧಿಕಾರಿ ಅರೆಸ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 30 MAY 2024

Suresh
ಸುರೇಶ್‌

SHIMOGA : ಜಮೀನು ಖಾತೆ ಮಾಡಿಕೊಡಲು ಆರು ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ (Trap) ನಡೆಸಿ, ಗ್ರಾಮ ಆಡಳಿತ ಅಧಿಕಾರಿಯನ್ನು ಬಂಧಿಸಿದ್ದಾರೆ. ಶಿವಮೊಗ್ಗ ತಾಲೂಕು ಕಸಬಾ ಹೋಬಳಿ ಗಾಡಿಕೊಪ್ಪ ವೃತ್ತದ ಕಚೇರಿಯಲ್ಲಿ ದಾಳಿ ನಡೆಸಲಾಗಿದೆ.

ಕೃಷಿ ನಗರದ ಸಂಕೇತ್‌ ಎಂಬುವವರು ತಮ್ಮ ತಾಯಿ ಹೆಸರಿಗೆ ಜಮೀನಿನ ನೋಂದಣಿ ಮಾಡಿಸಿದ್ದರು. ಅದರ ಖಾತೆ ಮಾಡಿಕೊಡುವಂತೆ ಗ್ರಾಮ ಆಡಳಿತ ಅಧಿಕಾರಿ ಸುರೇಶ್‌ ಅವರಿಗೆ ಕೇಳಿಕೊಂಡಿದ್ದರು. ಇದಕ್ಕೆ ಆರು ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಸಂಕೇತ್‌ ಅವರು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ಇವತ್ತು ಹಣ ಪಡೆಯುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ‘ಶೆಟ್ಟರ ಸಂತೆ’, ವಿವಿಧ ತಿಂಡಿ, ತಿನಿಸು, ಡ್ರೆಸ್‌ ಮೆಟೀರಿಯಲ್‌ ಪ್ರದರ್ಶನ, ಮಾರಾಟ, ಎಲ್ಲಿ? ಯಾವಾಗ?

ಲೋಕಾಯುಕ್ತ ಇನ್ಸ್‌ಪೆಕ್ಟರ್‌ ವೀರಬಸಪ್ಪ ಎಲ್.ಕುಸಲಾಪುರ ತನಿಖೆ ನಡೆಸುತ್ತಿದ್ದಾರೆ. ಅಧೀಕ್ಷಕ ಮಂಜುನಾಥ್ ಚೌಧರಿ ಎಂ.ಹೆಚ್, ಪೊಲೀಸ್ ಉಪಾಧೀಕ್ಷಕ ಉಮೇಶ ಈಶ್ವರ ನಾಯ್ಕ ಮಾರ್ಗದರ್ಶನದಲ್ಲಿ ಲೋಕಾಯುಕ್ತ ಕಚೇರಿ ಸಿಬ್ಬಂದಿ ವಿ.ಎ.ಮಹಂತೇಶ, ಯೋಗೇಶ್, ಸುರೇಂದ್ರ ಹೆಚ್.ಜಿ., ಬಿ.ಟಿ ಚನ್ನೇಶ್‌, ಪ್ರಶಾಂತ್‌ ಕುಮಾರ್‌, ರಘುನಾಯ್ಕ, ದೇವರಾಜ್, ಗಂಗಾಧರ, ಪ್ರದೀಪ್, ಗೋಪಿ.ವಿ, ಜಯಂತ್ ಇವರುಗಳು ಹಾಜರಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 30, 2024

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment