ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 30 MAY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಜಮೀನು ಖಾತೆ ಮಾಡಿಕೊಡಲು ಆರು ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ (Trap) ನಡೆಸಿ, ಗ್ರಾಮ ಆಡಳಿತ ಅಧಿಕಾರಿಯನ್ನು ಬಂಧಿಸಿದ್ದಾರೆ. ಶಿವಮೊಗ್ಗ ತಾಲೂಕು ಕಸಬಾ ಹೋಬಳಿ ಗಾಡಿಕೊಪ್ಪ ವೃತ್ತದ ಕಚೇರಿಯಲ್ಲಿ ದಾಳಿ ನಡೆಸಲಾಗಿದೆ.
ಕೃಷಿ ನಗರದ ಸಂಕೇತ್ ಎಂಬುವವರು ತಮ್ಮ ತಾಯಿ ಹೆಸರಿಗೆ ಜಮೀನಿನ ನೋಂದಣಿ ಮಾಡಿಸಿದ್ದರು. ಅದರ ಖಾತೆ ಮಾಡಿಕೊಡುವಂತೆ ಗ್ರಾಮ ಆಡಳಿತ ಅಧಿಕಾರಿ ಸುರೇಶ್ ಅವರಿಗೆ ಕೇಳಿಕೊಂಡಿದ್ದರು. ಇದಕ್ಕೆ ಆರು ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಸಂಕೇತ್ ಅವರು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ಇವತ್ತು ಹಣ ಪಡೆಯುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ‘ಶೆಟ್ಟರ ಸಂತೆ’, ವಿವಿಧ ತಿಂಡಿ, ತಿನಿಸು, ಡ್ರೆಸ್ ಮೆಟೀರಿಯಲ್ ಪ್ರದರ್ಶನ, ಮಾರಾಟ, ಎಲ್ಲಿ? ಯಾವಾಗ?
ಲೋಕಾಯುಕ್ತ ಇನ್ಸ್‌ಪೆಕ್ಟರ್ ವೀರಬಸಪ್ಪ ಎಲ್.ಕುಸಲಾಪುರ ತನಿಖೆ ನಡೆಸುತ್ತಿದ್ದಾರೆ. ಅಧೀಕ್ಷಕ ಮಂಜುನಾಥ್ ಚೌಧರಿ ಎಂ.ಹೆಚ್, ಪೊಲೀಸ್ ಉಪಾಧೀಕ್ಷಕ ಉಮೇಶ ಈಶ್ವರ ನಾಯ್ಕ ಮಾರ್ಗದರ್ಶನದಲ್ಲಿ ಲೋಕಾಯುಕ್ತ ಕಚೇರಿ ಸಿಬ್ಬಂದಿ ವಿ.ಎ.ಮಹಂತೇಶ, ಯೋಗೇಶ್, ಸುರೇಂದ್ರ ಹೆಚ್.ಜಿ., ಬಿ.ಟಿ ಚನ್ನೇಶ್, ಪ್ರಶಾಂತ್ ಕುಮಾರ್, ರಘುನಾಯ್ಕ, ದೇವರಾಜ್, ಗಂಗಾಧರ, ಪ್ರದೀಪ್, ಗೋಪಿ.ವಿ, ಜಯಂತ್ ಇವರುಗಳು ಹಾಜರಿದ್ದರು.