ಶಿವಮೊಗ್ಗ : ಲಂಡನ್‌ನಿಂದ (London) ಬೆಲೆ ಬಾಳುವ ಗಿಫ್ಟ್ ಬಂದಿದೆ ಎಂದು ನಂಬಿಸಿ ಭದ್ರಾವತಿಯ ವ್ಯಕ್ತಿಯೊಬ್ಬರಿಗೆ (ಹೆಸರು ಗೌಪ್ಯ) 8.56 ಲಕ್ಷ ರೂ. ವಂಚಿಸಲಾಗಿದೆ. ಇದೇ ಮಾದರಿ ಈ ಹಿಂದೆಯು ಹಲವರಿಗೆ ವಂಚನೆಯಾಗಿದ್ದು, ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಿದೆ.
ಲಂಡನ್‌ನಿಂದ ಬಂತು ಫೋನ್
ಲಂಡನ್‌ನಿಂದ (London) ಮೈಕಲ್ ಮ್ಯಾಕ್‌ಡೊನಾಲ್ಡ್ ಹೆಸರಿನಲ್ಲಿ ಕರೆ ಮತ್ತು ಮೆಸೇಜ್ ಮಾಡಿ 43 ಲಕ್ಷ ರೂ. ಮೌಲ್ಯದ ಗಿಫ್ಟ್ ಕಳುಹಿಸುತ್ತಿರುವುದಾಗಿ ಭದ್ರಾವತಿಯ ವ್ಯಕ್ತಿಗೆ ನಂಬಿಸಿದ್ದ. ಗಿಫ್ಟ್ ಕಳುಹಿಸಲು ಕಂಪನಿಯ ವೇಯ್ಟಿಂಗ್ ಚಾರ್ಜ್ 5 ಸಾವಿರ ರೂ. ಪಾವತಿಸುವಂತೆ ತಿಳಿಸಿ, ಬ್ಯಾಂಕ್ ಖಾತೆ ಮತ್ತು ಗೂಗಲ್ ಪೇ ನಂಬರ್ ಕಳುಹಿಸಿದ್ದ. ಭದ್ರಾವತಿಯ ವ್ಯಕ್ತಿ ಈ ಖಾತೆಗಳಿಗೆ ಹಣ ಕಳುಹಿಸಿದ್ದರು. ಬಳಿಕ ವಿವಿಧ ಚಾರ್ಜ್‌ಗಳ ಹೆಸರಿನಲ್ಲಿ ಒಟ್ಟು 6.53 ಲಕ್ಷ ರೂ. ಹಣ ವರ್ಗಾಯಿಸಿಕೊಂಡಿದ್ದ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ » ಸಹ್ಯಾದ್ರಿ ಕಾಲೇಜಿನಲ್ಲಿ ಬೆಳಗ್ಗೆ ಲ್ಯಾಬ್ ಬಾಗಿಲು ತೆರೆಯಲು ಬಂದ ಸಿಬ್ಬಂದಿಗೆ ಕಾದಿತ್ತು ಶಾಕ್, ಆಗಿದ್ದೇನು?
ವಿಮಾನ ನಿಲ್ದಾಣದಿಂದ ಫೋನ್
ಸ್ವಲ್ಪ ದಿನದ ಬಳಿಕ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿ ಸೋಗಿನಲ್ಲಿ ಕರೆ ಮಾಡಿದ ವ್ಯಕ್ತಿ ಲಕ್ಷಾಂತರ ಮೌಲ್ಯದ ಗಿಫ್ಟ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಅವುಗಳನ್ನು ಪಡೆದುಕೊಳ್ಳಲು 2.03 ಲಕ್ಷ ರೂ. ಪಾವತಿಸಬೇಕು ಎಂದು ತಿಳಿಸಿದ್ದು, ವಿವಿಧ ನಂಬರ್‌ಗಳಿಂದ ಕರೆ ಮಾಡಿ ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದರು.

ಒಟ್ಟು 8.56 ಲಕ್ಷ ರೂ. ಹಣವನ್ನು ವರ್ಗಾಯಿಸಿಕೊಂಡಿದ್ದರೂ ಗಿಫ್ಟ್ ಬಾರದಿದ್ದರಿಂದ ಅನುಮಾನಗೊಂಡು ಪರಿಚಿತರಲ್ಲಿ ವಿಚಾರಿಸಿದಾಗ ಮೋಸ ಹೋಗಿರುವುದು ಗೊತ್ತಾಗಿದೆ. ಘಟನೆ ಸಂಬಂಧ ಶಿವಮೊಗ್ಗ ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಗಿಳಿ ಹಿಡಿಯಲು ಹೋದ ಯುವಕ ಸಾವು, ಇಬ್ಬರು ಪ್ರಾಣಪಾಯದಿಂದ ಪಾರು, ಹೇಗಾಯ್ತು ಘಟನೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200