ಶಿವಮೊಗ್ಗ LIVE
ಶಿವಮೊಗ್ಗ: ಬಾಡಿಗೆಗಾಗಿ ಕಾಯುತ್ತ ಲಾರಿಯಲ್ಲೇ ಮಲಗಿದ್ದ ಡ್ರೈವರ್, ಕ್ಲೀನರ್‌ಗೆ ಇಬ್ಬರು ದುಷ್ಕರ್ಮಿಗಳು ಲಾಂಗ್ ತೋರಿಸಿ, ಮೊಬೈಲ್ ಮತ್ತು ನಗದು ದರೋಡೆ (robbed) ಮಾಡಿಕೊಂಡು ಹೋಗಿದ್ದಾರೆ. ಘಟನೆಯಲ್ಲಿ ಚಾಲಕನ ಎರಡು ಕಾಲಿಗು ಲಾಂಗ್ ಉಲ್ಟಾ ಮಾಡಿಕೊಂಡು ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ » ಹೊಸ ವರ್ಷದ ಪಾರ್ಟಿ ವೇಳೆ ಕೈ ಕೈ ಮಿಲಾಯಿಸಿದ ಯುವಕರು, ಚೇರ್‌ಗಳಿಂದಲೇ ಬಡಿದಾಟ
ಮೈಸೂರು ಮೂಲದ ಲಾರಿ ಚಾಲಕ ಚಂದ್ರಶೇಖರ ಮತ್ತು ಕ್ಲೀನರ್ ಹಿತೇಶ್ ನಾಯಕ ಎಂಬುವವರನ್ನು ಬೆದರಿಸಲಾಗಿದೆ. ಇಬ್ಬರೂ ಬಾಡಿಗೆಗಾಗಿ ಕಾಯುತ್ತ ಶಿವಮೊಗ್ಗದ ಸಾಗರ ರಸ್ತೆಯಲ್ಲಿ ಲಾರಿ ನಿಲ್ಲಿಸಿದ್ದರು. ಬೆಳಗಿನ ಜಾವ 4.30ರ ಹೊತ್ತಿಗೆ ಲಾರಿಯೊಳಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ಲಾಂಗ್ ತೋರಿಸಿ ಬೆದರಿಸಿದ್ದಾರೆ. ಈ ವೇಳೆ ಚಾಲಕ ಚಂದ್ರಶೇಖರ್ ಅವರ ಕಾಲಿಗೆ ಲಾಂಗ್ ಉಲ್ಟಾ ಮಡಿಕೊಂಡು ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ.
ಲಾರಿಯಲ್ಲಿದ್ದ ಬಾಡಿಗೆ ಹಣ ₹20,000, ಕ್ಲೀನರ್ ಹಿತೇಶ್ ನಾಯಕ ಬಳಿ ಇದ್ದ ಮೊಬೈಲ್ ಫೋನ್ ಕಸಿದುಕೊಂಡು ದುಷ್ಕರ್ಮಿಗಳು ಬೈಕಿನಲ್ಲಿ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






