ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 27 NOVEMBER 2023
SHIMOGA : ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಹೆಸರಿನಲ್ಲಿ ಫೇಸ್ಬುಕ್ ಗ್ರೂಪ್ ರಚಿಸಿ ಗ್ಯಾರಂಟಿ ಯೋಜನೆಗಳ ಅಪಹಾಸ್ಯ ಮಾಡುವ ಪೋಸ್ಟ್ ಪ್ರಕಟಿಸಲಾಗಿದೆ. ಈ ಸಂಬಂಧ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಸಂಯೋಜಕ ಜಿ.ಡಿ.ಮಂಜುನಾಥ್ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಫೇಸ್ಬುಕ್ನಲ್ಲಿ ಶ್ರೀ ಮಾನ್ಯ ಮಧು ಬಂಗಾರಪ್ಪ ಜಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಎಂದು ಗ್ರೂಪ್ ರಚಿಸಲಾಗಿದೆ. ಇದರಲ್ಲಿ 58 ಸಾವಿರ ಫಾಲೋವರ್ಗಳಿದ್ದಾರೆ. ಈ ಗ್ರೂಪ್ನಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಅಪಹಾಸ್ಯ ಮಾಡಲಾಗಿದೆ. ಅಲ್ಲದೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಅವಹೇಳನ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಸಚಿವ ಮಧು ಬಂಗಾರಪ್ಪ ಅವರ ಹೆಸರಿಗೆ ಧಕ್ಕೆ ತರಲು ಯತ್ನಿಸಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜಿ.ಡಿ.ಮಂಜುನಾಥ್ ದೂರಿನಲ್ಲಿ ಮನವಿ ಮಾಡಿದ್ದಾರೆ.
ಇದನ್ನೂ ಓದಿ – ದೀವರ ಸಾಂಸ್ಕೃತಿಕ ವೈಭವ, ಮೂವರಿಗೆ ಪ್ರಶಸ್ತಿ, ದೊಡ್ಡ ಸಮಾವೇಶದ ದಿನಾಂಕ ಪ್ರಕಟಿಸಿದ ಮಿನಿಸ್ಟರ್
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422