ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕುಡಿಯಲು ಹಣ ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ಬಿಯರ್ ಬಾಟಲಿಯಿಂದ (Bottle) ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಲಾಗಿದೆ. ಗೋಪಾಳ ಬಡಾವಣೆಯ ನಿವಾಸಿ ಹೆಚ್.ಜಿ. ಕಿರಣ್ (32) ಹಲ್ಲೆಗೊಳಗಾದವರು.
ಶಿವಮೊಗ್ಗ ಎಪಿಎಂಸಿ ಸಮೀಪ ಇರುವ ವೈನ್ ಶಾಪ್ಗೆ ಕಿರಣ್ ತಮ್ಮ ಸ್ನೇಹಿತರ ಜೊತೆಗೆ ತೆರಳಿದ್ದರು. ಈ ವೇಳೆ ಅಲ್ಲಿಗೆ ಬಂದ ವ್ಯಕ್ತಿ, ಕಿರಣ್ ಅವರ ಬಳಿ ಮದ್ಯ ಸೇವಿಸಲು ಹಣ ಕೇಳಿದ್ದಾನೆ. ಕಿರಣ್ ಹಣ ನೀಡಲು ನಿರಾಕರಿಸಿದಾಗ, ಅವಾಚ್ಯವಾಗಿ ಬೈದು ಪಕ್ಕದಲ್ಲೇ ಇದ್ದ ಬಿಯರ್ ಬಾಟಲಿಯಿಂದ ಕಿರಣ್ ಅವರ ತಲೆಗೆ ಹೊಡೆದು ಗಾಯಗೊಳಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಇದೇ ವೇಳೆ ಕಿರಣ್ಗೆ ಜೀವ ಬೆದರಿಕೆ ಒಡ್ಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಘಟನೆ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶರಾವತಿ ಹಿನ್ನೀರಿನಲ್ಲಿ ಈಜಲು ಹೋಗಿದ್ದ ಡಾಕ್ಟರ್ ಸಾವು, ಹೇಗಾಯ್ತು ಘಟನೆ?
LATEST NEWS
- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

About The Editor
ನಿತಿನ್ ಆರ್.ಕೈದೊಟ್ಲು






