ವೈನ್‌ ಶಾಪ್‌ನಲ್ಲಿ ಬಿಯರ್‌ ಬಾಟಲಿಯಿಂದ ಯುವಕನ ತಲೆಗೆ ಹೊಡೆದ ವ್ಯಕ್ತಿ, ಕಾರಣವೇನು?

ಶಿವಮೊಗ್ಗ: ಕುಡಿಯಲು ಹಣ ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ಬಿಯರ್ ಬಾಟಲಿಯಿಂದ (Bottle) ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಲಾಗಿದೆ. ಗೋಪಾಳ ಬಡಾವಣೆಯ ನಿವಾಸಿ ಹೆಚ್.ಜಿ. ಕಿರಣ್ (32) ಹಲ್ಲೆಗೊಳಗಾದವರು. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಂಜಪ್ಪ ಲೈಫ್‌ ಕೇರ್‌ನಲ್ಲಿ ಉಚಿತ ಸಮಾಲೋಚನೆ, 40% ರಿಯಾಯಿತಿ Nanjappa Hospital Advertisement ಇಲ್ಲಿ ಕ್ಲಿಕ್‌ ಮಾಡಿ ನೇರವಾಗಿ ಕರೆ ಮಾಡಿ ಹೆಸರು ನೋಂದಾಯಿಸಿ

ಶಿವಮೊಗ್ಗ ಎಪಿಎಂಸಿ ಸಮೀಪ ಇರುವ ವೈನ್‌ ಶಾಪ್‌ಗೆ ಕಿರಣ್ ತಮ್ಮ ಸ್ನೇಹಿತರ ಜೊತೆಗೆ ತೆರಳಿದ್ದರು. ಈ ವೇಳೆ ಅಲ್ಲಿಗೆ ಬಂದ ವ್ಯಕ್ತಿ, ಕಿರಣ್ ಅವರ ಬಳಿ ಮದ್ಯ ಸೇವಿಸಲು ಹಣ ಕೇಳಿದ್ದಾನೆ. ಕಿರಣ್ ಹಣ ನೀಡಲು ನಿರಾಕರಿಸಿದಾಗ, ಅವಾಚ್ಯವಾಗಿ ಬೈದು ಪಕ್ಕದಲ್ಲೇ ಇದ್ದ ಬಿಯರ್ ಬಾಟಲಿಯಿಂದ ಕಿರಣ್ ಅವರ ತಲೆಗೆ ಹೊಡೆದು ಗಾಯಗೊಳಿಸಿದ್ದಾನೆ ಎಂದು ಆರೋಪಿಸಲಾಗಿದೆ.

Crime-News-General-Image

ಇದೇ ವೇಳೆ ಕಿರಣ್‌ಗೆ ಜೀವ ಬೆದರಿಕೆ ಒಡ್ಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಘಟನೆ ಸಂಬಂಧ ವಿನೋಬನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶರಾವತಿ ಹಿನ್ನೀರಿನಲ್ಲಿ ಈಜಲು ಹೋಗಿದ್ದ ಡಾಕ್ಟರ್‌ ಸಾವು, ಹೇಗಾಯ್ತು ಘಟನೆ?

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment