ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಜಗಳವಾಗಿ ಪತಿಯೆ ಪತ್ನಿಯ ಮೂಗನ್ನು (Nose) ಕಚ್ಚಿ ತುಂಡರಿಸಿದ್ದಾನೆ. ಚನ್ನಗಿರಿ ತಾಲೂಕಿನ ಮಂಟರಘಟ್ಟ ಗ್ರಾಮದಲ್ಲಿ ಘಟನೆ ಸಂಭವಿಸಿದೆ.
ತುಂಡಾದ ಮೂಗಿನೊಂದಿಗೆ ಪತ್ನಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲಾಗಿದ್ದಾಳೆ.

ಸಾಲದ ವಿಚಾರವಾಗಿ ಕಿರಿಕ್
ವಿಜಯ್ ಮತ್ತು ವಿದ್ಯಾ ದಂಪತಿ ಧರ್ಮಸ್ಥಳ ಸ್ವಸಹಾಯ ಸಂಘದಿಂದ ₹2 ಲಕ್ಷ ಸಾಲ ಪಡೆದಿದ್ದರು. ಇಬ್ಬರು ಸೇರಿ ಕಂತು ಕಟ್ಟುತ್ತಿದ್ದರು. ಕಳೆದ ಎರಡು ವಾರ ಹಣವಿಲ್ಲದ್ದರಿಂದ ವಿದ್ಯಾ ಸಾಲದ ಕಂತು ಪಾವತಿಸಿರಲಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸಂಘದವರು ಪತಿ ವಿಜಯ್‌ಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ಈ ವಿಚಾರವಾಗಿ ದಂಪತಿ ಮಧ್ಯೆ ಜಗಳವಾಗಿತ್ತು ಎಂದು ಆರೋಪಿಸಲಾಗಿದೆ.
ಹೆಂಡತಿಯ ಮೂಗನ್ನೇ ಕಚ್ಚಿದ ಗಂಡ
ಜಗಳದ ಸಂದರ್ಭ ವಿದ್ಯಾಳ ಮೂಗನ್ನೇ ಪತಿ ವಿಜಯ್ ಕಚ್ಚಿ ತುಂಡರಿಸಿದ್ದಾನೆ. ಸ್ಥಳೀಯರು ಗಲಾಟೆ ಬಿಡಿಸಿದ್ದಾರೆ. ತುಂಡಾದ ಮೂಗಿನೊಂದಿಗೆ ವಿದ್ಯಾ ಚನ್ನಗಿರಿಯ ಸರ್ಕಾರಿ ಆಸ್ಪತ್ರೆಗೆ ತೆರಳಿದ್ದರು. ಪ್ರಾಥಮಿಕ ಚಿಕಿತ್ಸೆ ಬಳಿಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಮೂಗು ಜೋಡಿಸುವ ಶಸ್ತ್ರಚಿಕಿತ್ಸೆಗಾಗಿ ಸರ್ಜಿ ಆಸ್ಪತ್ರೆಗೆ ವಿದ್ಯಾಳನ್ನು ರವಾನಿಸಲಾಗಿದೆ.
ಈ ಹಿನ್ನೆಲೆ ಶಿವಮೊಗ್ಗದ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈಗ ಪ್ರಕರಣವನ್ನು ಚನ್ನಗಿರಿ ಠಾಣೆಗೆ ವರ್ಗಾಯಿಸಲಾಗಿದೆ.
ಇದನ್ನೂ ಓದಿ » ಭದ್ರಾ ಜಲಾಶಯದ ಗೇಟುಗಳು ಓಪನ್, ಎಷ್ಟು ನೀರು ಹೊಳೆಗೆ ಹರಿಸಲಾಗ್ತಿದೆ?
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು















