ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 13 ಅಕ್ಟೋಬರ್ 2021
ನಡುರಸ್ತೆಯಲ್ಲಿ ಬೈಕ್ ನಿಲ್ಲಿಸಿ ಸೀಮೆ ಎಣ್ಣೆ ಸುರಿದುಕೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆಸ್ತಿ ವ್ಯಾಜ್ಯ ಸಂಬಂಧ ಮನನೊಂದು ಕೃತ್ಯ ಎಸಗಿರುವ ಶಂಕೆ ಇದೆ.
ತೀರ್ಥಹಳ್ಳಿ ತಾಲೂಕು ಅಕ್ಲಾಪುರ ಗ್ರಾಮದ ರಾಘವೇಂದ್ರ (40) ಮೃತ ವ್ಯಕ್ತಿ. ಮನೆಯಿಂದಲೇ ಸೀಮೆ ಎಣ್ಣೆ ತಂದಿದ್ದ ರಾಘವೇಂದ್ರ, ದತ್ತರಾಜಪುರ ಮಾರ್ಗದಲ್ಲಿ ಹೋಗುವಾಗ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ.
ತೀವ್ರ ಸುಟ್ಟಗಾಯಗಳಿಂದಾಗಿ ರಾಘವೇಂದ್ರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದಾರಿಯಲ್ಲಿ ಹೋಗುವವರು ಘಟನೆ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಘಟನೆಗೆ ಕಾರಣವೇನು?
ಆಸ್ತಿವ್ಯಾಜ್ಯ ಸಂಬಂಧ ರಾಘವೇಂದ್ರ ಅವರು ಮನನೊಂದಿದ್ದರು ಎಂದು ತಿಳಿದು ಬಂದಿದೆ. ಇದೆ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ರಾಘವೇಂದ್ರಾಗೆ ಪತ್ನಿ, ಇಬ್ಬರು ಮಕ್ಕಳಿದ್ದಾರೆ.
ಘಟನೆ ಸಂಬಂಧ ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















