ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಆಗಸ್ಟ್ 2021
ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಬಟ್ಟೆ ಒಗೆಯಲು ಹೋಗಿದ್ದಾಗ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಶಿವಮೊಗ್ಗದ ಹರಿಗೆ ಬಳಿ ಘಟನೆ ಸಂಭವಿಸಿದೆ. ಇಲ್ಲಿನ ನಾಗರಾಜ್ (55) ಮೃತರು. ಸಮೀಪದ ಚಾನೆಲ್ ಬಳಿ ಬಟ್ಟೆ ಒಗೆಯಲು ತೆರಳಿದ್ದರು. ಹಿಂತಿರುಗುವಾಗ ರೈಲ್ವೆ ಹಳಿ ದಾಟುತ್ತಿದ್ದಾಗ ಘಟನೆ ಸಂಭವಿಸಿರುವ ಶಂಕೆಯಿದೆ.
ಘಟನೆ ಸಂಬಂಧ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರೆದಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200