ತಾಳಗುಪ್ಪ – ಮೈಸೂರು ರೈಲಿಗೆ ಸಿಲುಕಿ ವ್ಯಕ್ತಿ ಸಾವು, ರುಂಡ, ಮುಂಡ ಬೇರೆಯಾಗಿ ಹಳಿ ಮೇಲೆ ಬಿದ್ದಿತ್ತು ಮೃತದೇಹ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

NEWS HIGHLIGHTS
ಶಿವಮೊಗ್ಗ ಲೈವ್.ಕಾಂ | SAGARA NEWS | 15 ಜುಲೈ 2021
➤ ಸುದ್ದಿಯ ಮುಂದಿನ 7 ಪ್ಯಾರಾಗಳು ಕೆಳಗಿವೆ.

ತಾಳಗುಪ್ಪ – ಮೈಸೂರು ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ. ಇದು ಆತ್ಮಹತ್ಯೆಯೋ ಕೊಲೆಯೊ ಅನ್ನವ ಕುರಿತು ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಾಗರ ತಾಲೂಕಿನ ಗುಡ್ಡೆಕೌತಿ ಬಳಿಕ ರೈಲ್ವೆ ಹಳಿ ಮೇಲೆ ಘಟನೆ ಸಂಭವಿಸಿದೆ. ಸುಮಾರು 35 ವರ್ಷದ ವ್ಯಕ್ತಿಯೊಬ್ಬ ರೈಲ್ವೆ ಹಳಿ ಮೇಲೆ ಮೃತಪಟ್ಟಿದ್ದಾನೆ. ಆತನ ರುಂಡ, ಮುಂಡ ಬೇರೆಯಾಗಿದೆ.

ಹಳಿ ಮೇಲೆ ಮೃತದೇಹ ಇರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಭೇಟಿ ನೀಡಿದ ರೈಲ್ವೆ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ವ್ಯಕ್ತಿಯು ನೀಲಿ ಬಣ್ಣದ ರೈನ್‍ ಕೋಟ್, ರೈನ್ ಪ್ಯಾಂಟ್‍ ಧರಿಸಿದ್ದಾನೆ. ಸಂಬಂಧಪಟ್ಟವರು ಕೂಡಲೆ ರೈಲ್ವೆ ಪೊಲೀಸರನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

Leave a Comment