SHIVAMOGGA LIVE NEWS | 28 ಫೆಬ್ರವರಿ 2022
ಪೆಟ್ರೋಲ್ ಸುರಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸ್ಥಳೀಯರು ಅವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ತೀವ್ರ ಸುಟ್ಟ ಗಾಯ ಆಗಿರುವುದರಿಂದ ಅವರನ್ನು ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಶಿವಮೊಗ್ಗದ ಹೊಸಮನೆ ಬಡಾವಣೆಯಲ್ಲಿ ಘಟನೆ ಸಂಭವಿಸಿದೆ. ಮಂಜುನಾಥ ಎಂಬುವವರು ಆತ್ಮಹತ್ಯೆಗೆ ಯತ್ನಿಸಿದವರು.
ಮನೆಯೊಂದರ ಮುಂದೆ ಮಂಜುನಾಥ ಅವರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಧಗಧಗ ಹೊತ್ತಿ ಉರಿಯುತ್ತಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೆ ನೆರವಿಗೆ ಧಾವಿಸಿದ್ದಾರೆ. ಆಂಬುಲೆನ್ಸ್ ಕರೆಯಿಸಿ ಮಂಜುನಾಥ ಅವರನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.
ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ದೊಡ್ಡಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.