ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಆಗಸ್ಟ್ 2020
ಕುಖ್ಯಾತ ರೌಡಿ ಮಾರ್ಕೆಟ್ ಲೋಕಿಯನ್ನು ಬಳ್ಳಾರಿ ಜೈಲಿನಿಂದ ಪೊಲೀಸ್ ಭದ್ರತೆಯಲ್ಲಿ ಇವತ್ತು ಶಿವಮೊಗ್ಗಕ್ಕೆ ಕರೆತರಲಾಗಿದೆ. ತಂದೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಲೋಕಿಗೆ ಅವಕಾಶ ಕಲ್ಪಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮಾರ್ಕೆಟ್ ಲೋಕಿ ತಂದೆ ಲಕ್ಷ್ಮೀನಾರಾಯಣ ಕೊನೆಯುಸಿರೆಳೆದಿದ್ದಾರೆ. ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಕೋರ್ಟ್ ಅನುಮತಿ ನೀಡಿದೆ. ಹಾಗಾಗಿ ಇವತ್ತು ಸವರ್ ಲೈನ್ ರಸ್ತೆಯಲ್ಲಿರುವ ಮನೆಗೆ ಕರೆದುಕೊಂಡು ಬರಲಾಗಿದೆ.
ಮನೆ ಬಳಿ ಬಿಗಿ ಭದ್ರತೆ
ಇನ್ನು, ಮಾರ್ಕೆಟ್ ಲೋಕಿಯನ್ನು ಶಿವಮೊಗ್ಗಕ್ಕೆ ಕರೆತರುತ್ತಿರವ ಹಿನ್ನೆಲೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಸವರ್ಲೈನ್ ರಸ್ತೆಯಲ್ಲಿರುವ ಲೋಕಿ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಹಾಗಾಗಿ ಮನೆ ಬಳಿ ಪೊಲೀಸರನ್ನು ನಿಯೋಜಿಸಲಾಗಿತ್ತು.
ಮಾರ್ಕೆಟ್ ಗಿರಿ ಹತ್ಯೆ ಪ್ರಕರಣ ಸಂಬಂಧ ಮಾರ್ಕೆಟ್ ಲೋಕಿಯನ್ನು ಬಂಧಿಸಲಾಗಿದೆ. ಬಳ್ಳಾರಿ ಜೈಲಿನಲ್ಲಿ ಲೋಕಿಯನ್ನು ಬಂಧಿಸಿಡಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]