ಶಿವಮೊಗ್ಗ ಲೈವ್
ಶಿವಮೊಗ್ಗ: ಅಣ್ಣಾನಗರದ ಚಾನಲ್ ಬಳಿ ಶನಿವಾರ ರಾತ್ರಿ ಗಾರೆ ಕೆಲಸಗಾರ ಉಸ್ಮಾನ್ ಅಲಿ (34) ಅವರನ್ನು ಕೊಲೆ ಮಾಡಲಾಗಿದೆ. ಇವರು ಅಶೋಕನಗರ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ.
ಹಣಕಾಸಿನ ವ್ಯವಹಾರ ಸಂಬಂಧ ಪರಿಚಿತರ ಮಧ್ಯೆ ವಾಗ್ವಾದ ನಡೆದಿದ್ದು, ಮಾರಕಾಸ್ತ್ರಗಳಿಂದ ಉಸ್ಮಾನ್ ಅವರನ್ನು ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ.

ದೊಡ್ಡಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.