ಶಿವಮೊಗ್ಗ: ಹಾಸ್ಟೆಲ್‌ನ ಕೊಠಡಿಯಲ್ಲಿ ಮೆಡಿಕಲ್ (Medical) ವಿದ್ಯಾರ್ಥಿನಿಯೊಬ್ಬಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುಬ್ಬಯ್ಯ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ವಿಷ್ಣು ಪ್ರಿಯಾ (22) ಮೃತಳು.
ಬೆಂಗಳೂರು ಮೂಲದ ವಿಷ್ಣು ಪ್ರಿಯಾ ಶಿವಮೊಗ್ಗದ ಸುಬ್ಬಯ್ಯ ಕಾಲೇಜಿನಲ್ಲಿ ಮೆಡಿಕಲ್ ವಿದ್ಯಾಭ್ಯಾಸ ಮಾಡುತ್ತಿದ್ದಳು. ಇವತ್ತು ಹಾಸ್ಟೆಲ್‌ನ ಕೊಠಡಿಯಲ್ಲಿ ಆಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿಷ್ಣು ಪ್ರಿಯಾ ವೈದ್ಯಕೀಯ ಪದವಿ ಪೂರ್ಣಗೊಳಿಸಿ ಇಂಟರ್ನ್‌ಶಿಪ್‌ನಲ್ಲಿದ್ದರು ಎಂದು ತಿಳಿದು ಬಂದಿದೆ. ವಿಷ್ಣು ಪ್ರಿಯಾಳ ಪೋಷಕರು ವಿದೇಶದಲ್ಲಿದ್ದಾರೆ. ಈ ಹಿನ್ನೆಲೆ ಆಕೆಯ ಸಂಬಂಧಿಕರಿಗೆ ಮಾಹಿತಿ ತಿಳಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ » ಸಿಟಿ ಸೆಂಟರ್ ಮಾಲ್‌ನಲ್ಲಿ ಸಿನಿಮಾ ನೋಡಿ ಹೊರ ಬಂದ ವ್ಯಕ್ತಿಗೆ ಕಾದಿತ್ತು ಆಘಾತ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200