ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | AYANUR NEWS | 23 ಆಗಸ್ಟ್ 2021
ಹಾಲು ಸರಬರಾಜು ವಾಹನ ಮರಕ್ಕೆ ಡಿಕ್ಕಿಯಾಗಿ, ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಆಯನೂರು ಸಮೀಪದ ಚೌಡೇಶ್ವರಿ ದೇವಸ್ಥಾನದ ಬಳಿ ರಾತ್ರಿ ಘಟನೆ ಸಂಭವಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸಂತೋಷ್, ಗಾಯಗೊಂಡಿರುವ ಕ್ಲೀನರ್. ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಮತ್ತು ಸಾರ್ವಜನಿಕರ ನೆರವಿನಿಂದ ಕ್ಲೀನರ್ನನ್ನು ರಕ್ಷಣೆ ಮಾಡಲಾಗಿದೆ. ಸಂತೋಷ್ನ ಎರಡು ಕಾಲುಗಳಿಗೆ ಗಂಭೀರ ಗಾಯವಾಗಿದೆ. ಕೂಡಲೆ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು.
ಹೇಗಾಯ್ತು ಅಪಘಾತ?
ಹಾಲು ಸರಬರಾಜು ವಾಹನ ಶಿವಮೊಗ್ಗದಿಂದ ಸಾಗರದ ಕಡೆಗೆ ತೆರಳುತಿತ್ತು. ಆಯನೂರುನಿಂದ ಸ್ವಲ್ಪ ಮುಂದೆ ಚೌಡೇಶ್ವರಿ ದೇಗುಲದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆಯಿಂದ ಪಕ್ಕಕ್ಕೆ ಹೋಗಿದೆ.
ರಸ್ತೆ ಪಕ್ಕದ ಮರಕ್ಕೆ ಲಾರಿ ಡಿಕ್ಕಿಯಾಗಿದ್ದು, ಮುಂಭಾಗ ನುಜ್ಜುಗುಜ್ಜಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆ ಲಾರಿ ಚಾಲಕ ಕ್ಯಾಬಿನ್ನಿಂದ ಹೊರಗೆ ಬಂದಿದ್ದಾರೆ. ಆದರೆ ಕ್ಲೀನರ್ ಸಂತೋಷ್ ಅವರು ಕ್ಯಾಬಿನ್ನಲ್ಲಿ ಸಿಕ್ಕಿಬಿದ್ದಿದ್ದಾರೆ. ವಿಚಾರ ತಿಳಿದು ಶಿವಮೊಗ್ಗದಿಂದ ಕುಂಸಿಗೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕಟರ್ಗಳನ್ನು ಬಳಸಿಕೊಂಡು ಸಂತೋಷ್ ಅವರನ್ನು ರಕ್ಷಣೆ ಮಾಡಿದ್ದಾರೆ.
ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200