ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ, MBBS ವಿದ್ಯಾರ್ಥಿಗಳು ಸಾವು, ರಸ್ತೆ ಮೇಲೆ ಹರಿದ ಹಾಲು, ನೆತ್ತರು

ಶಿವಮೊಗ್ಗ: ನಗರದ ಸರ್ಕ್ಯೂಟ್‌ ಹೌಸ್‌ ಸರ್ಕಲ್‌ನಲ್ಲಿ ಬೆಳಗಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮೆಡಿಕಲ್‌ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್‌ ಮತ್ತು ನಂದಿನಿ ಹಾಲಿನ ವಾಹನ (Milk Van) ಮುಖಾಮುಖಿ ಡಿಕ್ಕಿಯಾಗಿವೆ. ನೀವು ಸುದ್ದಿ ಓದುತ್ತಿರುವುದು ಶಿವಮೊಗ್ಗ ಲೈವ್‌.ಕಾಂ ವೆಬ್‌ಸೈಟ್‌ನಲ್ಲಿ. ಈ ಸುದ್ದಿಯ ಮುಂದಿನ 7 ಪ್ಯಾರಾಗಳು ಕೆಳಗಿವೆ.

ಮೂರನೇ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿಗಳಾದ ಆದಿತ್ಯ ಮತ್ತು ಸಂದೀಪ್‌ ಮೃತರು.

ರಸ್ತೆ ಮೇಲೆ ಹರಿದ ನೆತ್ತರು, ಹಾಲು

ನಂದಿನಿ ಹಾಲಿನ ವಾಹನ ಮತ್ತು ಬೈಕ್‌ ಡಿಕ್ಕಿಯಾಗಿ ಆದಿತ್ಯ ಮತ್ತು ಸಂದೀಪ್‌ ಕೆಳಗೆ ಬಿದ್ದು ಗಾಯಗೊಂಡು, ತೀವ್ರ ರಕ್ತಸ್ರಾವ ಉಂಟಾಗಿದೆ. ರಸ್ತೆ ಮೇಲೆ ರಕ್ತ ಮಡುವಿನಲ್ಲಿ ಒಬ್ಬರ ಮೇಲೊಬ್ಬರು ಬಿದ್ದು ಸ್ಥಳದಲ್ಲೇ ಅಸುನೀಗಿದ್ದಾರೆ.

mishap-at-circuit-house-circle-in-Shimoga-city.

ಇದನ್ನೂ ಓದಿ » ನಡೆದು ಹೋಗುತ್ತಿದ್ದ ವ್ಯಕ್ತಿಗೆ ಬಸ್‌ ಡಿಕ್ಕಿ, ಸಾವು, ಹೇಗಾಯ್ತು ಘಟನೆ?

ಇನ್ನು ಹಾಲಿನ ವಾಹನದಲ್ಲಿದ್ದ ಹಾಲಿನ ಕ್ರೇಟ್‌ಗಳೆಲ್ಲ ಕೆಳಗೆ ಬಿದ್ದು ಪ್ಯಾಕೆಟ್‌ಗಳು ಒಡೆದು ಹಾಲು ರಸ್ತೆಯ ಮೇಲೆ ಹರಿದಿದೆ.

‍ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಯುವಕರ ಮೃತದೇಹಗಳನ್ನು ಮೆಗ್ಗಾನ್‌ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

Milk Van and Bike mishap in Shimoga

mishap-at-circuit-house-circle-in-Shimoga-city.

Leave a Comment