ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 24 APRIL 2023
SHIMOGA : ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರಿದ್ದ ಮಿನಿ ಬಸ್ (Mini Bus) ಪಲ್ಟಿಯಾಗಿದೆ. ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ.
ಬ್ಯಾಕೋಡು ಸಮೀಪದ ಹೊಸಕೊಪ್ಪ ಬಳಿ ತಿರುವಿನಲ್ಲಿ ಘಟನೆ ಸಂಭವಿಸಿದೆ. ಕೊಲ್ಲೂರಿನಿಂದ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಅಪಘಾತವಾಗಿದೆ. ರಸ್ತೆ ಪಕ್ಕದ ಇಳಿ ಜಾರಿನಲ್ಲಿದ್ದ ತೋಟಕ್ಕೆ ಬಸ್ ಪಲ್ಟಿ ಹೊಡೆದಿದೆ.
ಹೇಗಾಯ್ತು ಘಟನೆ?
ಬೆಂಗಳೂರಿನ ದೇವನಹಳ್ಳಿಯ ನಿವಾಸಿಗಳು ವಿವಿಧೆಡೆ ಪ್ರವಾಸಕ್ಕೆ ಆಗಮಿಸಿದ್ದರು. ಕೊಲ್ಲೂರಿನಲ್ಲಿ ದೇವಸ್ಥಾನಕ್ಕೆ ತೆರಳಿ, ಅಲ್ಲಿಂದ ಸಿಗಂದೂರಿಗೆ ಬರುತ್ತಿದ್ದರು. ಬೆಳಗಿನ ಜಾವ ಹೊಸಕೊಪ್ಪ ಬಳಿ ತಿರುವಿನಲ್ಲಿ ಮಿನಿ ಬಸ್ (Mini Bus) ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಪಕ್ಕದ ಇಳಿಜಾರಿನಲ್ಲಿರುವ ತೋಟಕ್ಕೆ ಪಲ್ಟಿಯಾಗಿದೆ.
ಘಟನೆಯಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಸುಮಾರು 20 ಮಂದಿ ಗಾಯಗೊಂಡಿದ್ದಾರೆ. ಅವರನ್ನು ಕುಂದಾಪುರ, ಹೊಸನಗರದ ಖಾಸಗಿ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ, ನಿವೃತ್ತ ಅರಣ್ಯಾಧಿಕಾರಿ, ಹಿಂದಿನ ತಹಶೀಲ್ದಾರ್ ಸಂಬಂಧಿ ಮನೆಯಲ್ಲಿ ಶೋಧ
ಬಸ್ ಪಲ್ಟಿ ಹೊಡೆದ ವಿಚಾರ ತಿಳಿಯುತ್ತಿದ್ದಂತೆ ಸುತ್ತಮುತ್ತಲ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿ, ಗಾಯಾಳುಗಳಿಗೆ ನೆರವು ನೀಡಿದರು. ಬಸ್ಸಿನಿಂದ ಗಾಯಾಳುಗಳ ರಕ್ಷಣೆ ಮಾಡಿ, ಆಸ್ಪತ್ರೆಗೆ ದಾಖಲಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422