ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಯನ್ನು ಲಾಡ್ಜ್’ಗೆ ಕರೆದೊಯ್ದು ಅತ್ಯಾಚಾರವೆಸಗಿದ ಹೊಟೇಲ್ ಸಪ್ಲಯರ್

ನಿಮ್ಮ ಊರಿನ ಸುದ್ದಿಗಳನ್ನು ನಮಗೆ ವಾಟ್ಸಪ್ ಮಾಡಿ 7411700200

ಶಿವಮೊಗ್ಗದ ಲೈವ್.ಕಾಂ | BHADRAVATHI NEWS | 11 ಜನವರಿ 2022

ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಯನ್ನು ಹೊಟೇಲ್ ಸಪ್ಲಯರ್ ಒಬ್ಬಾತ, ಕರೆದೊಯ್ದು ಲಾಡ್ಜ್ ಒಂದರಲ್ಲಿ ಅತ್ಯಾಚಾರವೆಸಗಿದ್ದಾನೆ. ಈ ವಿಚಾರವನ್ನು ಹೊರಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾನೆ.

AVvXsEgvkqR5na6VBgyQ7GpgkZA0SK3TnlX05prWtKfmX8meEFOtOAl

ಉಮೇಶ್ (28), ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಆರೋಪಿ. ಭದ್ರಾವತಿ ಪಟ್ಟಣ ಸಮೀಪದ ಗ್ರಾಮವೊಂದರ ಹೊಟೇಲ್’ನ ಸಪ್ಲಯರ್ ಆಗಿ ಕೆಲಸ ಮಾಡುತ್ತಿದ್ದ.

ಪ್ರಕರಣ ಹಿನ್ನೆಲೆ

ಉಮೇಶ ಕೆಲಸ ಮಾಡುತ್ತಿದ್ದ ಹೊಟೇಲ್’ನಲ್ಲಿ ಮಹಿಳೆಯೊಬ್ಬರು ಕೆಲಸ ಮಾಡುತ್ತಿದ್ದರು. ಆ ಮಹಿಳೆಯ ಮಗಳು ಆಗಾಗ ಹೊಟೇಲ್’ಗೆ ಬಂದು ಹೋಗುತ್ತಿದ್ದಳು. ಆಕೆಯನ್ನು ಪರಿಚಯಿಸಿಕೊಂಡ ಉಮೇಶ್, ಕೃತ್ಯವೆಸಗಿದ್ದಾನೆ.

ಸೋಮವಾರ ಬೆಳಗ್ಗೆ ಅಪ್ರಾಪ್ತೆಯು ಶಾಲೆಗೆ ತೆರಳುತ್ತಿದ್ದಳು. ಈ ಸಂದರ್ಭ ಉಮೇಶ, ಆಕೆಯನ್ನು ಪುಸಲಾಯಿಸಿ, ಭದ್ರಾವತಿಯಿಂದ ಬಸ್ಸಿನಲ್ಲಿ ತರೀಕೆರೆಗೆ ಕರೆದೊಯ್ದಿದ್ದಾನೆ. ಅಲ್ಲಿ ಲಾಡ್ಜ್ ಒಂದರಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಅಲ್ಲದೆ ಈ ವಿಚಾರ ಹೊರಗೆ ಗೊತ್ತಾದರೆ ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾನೆ ಎಂದು ಆರೋಪಿಸಲಾಗಿದೆ.

ಘಟನೆ ಸಂಬಂಧ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ABOUT ME DECEMBER REPORT

ಹೆಚ್ಚಿನ Shimoga News, Shivamogga News ಮತ್ತು CRIME DIARY, BHADRAVATHI ಸುದ್ದಿಗಳಿಗಾಗಿ ಶಿವಮೊಗ್ಗ ಲೈವ್ ನೋಡಿ.

© ಶಿವಮೊಗ್ಗ ಲೈವ್‌ : ಜನವರಿ 11, 2022

Leave a Comment