ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 10 FEBRUARY 2023
SHIMOGA : ಸರ್ಕಾರಿ ಶಾಲೆಯಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮರಾಗಳನ್ನು (CCTV Camera) ದುಷ್ಕರ್ಮಿಗಳು ಹಾನಿ ಮಾಡಿದ್ದಾರೆ. ಅಲ್ಲದೆ ಇಂಟರ್ ನೆಟ್ ಕೇಬಲ್ ಕತ್ತರಿಸಿಕೊಂಡು ಹೊತ್ತೊಯ್ದಿದ್ದಾರೆ. ಶಿವಮೊಗ್ಗದ ನ್ಯೂ ಮಂಡ್ಲಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ಸಂಭವಿಸಿದೆ.
ಫೆ.4ರಂದು ರಾತ್ರಿ ಘಟನೆ ಸಂಭವಿಸಿದೆ. ಮರುದಿನ ಬೆಳಗ್ಗೆ ಶಿಕ್ಷಕರು, ಸಿಬ್ಬಂದಿ ಶಾಲೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇದನ್ನೂ ಓದಿ – ಪ್ರತಿಷ್ಠಿತ ಶಾಪಿಂಗ್ ಆ್ಯಪ್ ಹೆಸರಲ್ಲಿ ಶಿವಮೊಗ್ಗದ ವ್ಯಕ್ತಿಗೆ 5 ಲಕ್ಷ ರೂ. ಟೋಪಿ
ರಾತ್ರಿ ಶಾಲೆ ಆವರಣದೊಳಗೆ ನುಗ್ಗಿರುವ ಕಿಡಿಗೇಡಿಗಳು 2 ಸಿಸಿಟಿವಿ ಕ್ಯಾಮರಾಗಳನ್ನು (CCTV Camera) ಹಾನಿಗೊಳಿಸಿದ್ದಾರೆ. ಇಂಟರ್ ನೆಟ್ ಕೇಬಲ್ ತುಂಡು ಮಾಡಿ ತೆಗೆದುಕೊಂಡು ಹೋಗಿದ್ದಾರೆ. ಪೋಷಕರಿಂದ ದೇಣಿಗೆ ಸಂಗ್ರಹಿಸಿ ಶಾಲೆಗೆ ಸಿಸಿಟಿವಿಗಳನ್ನು ಅಳವಡಿಸಲಾಗಿತ್ತು ಎಂದು ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ರಿಯಾಜ್ ಅಹಮದ್ ದೂರಿನಲ್ಲಿ ಆರೋಪಿಸಿದ್ದಾರೆ.
ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.