ನಡುರಾತ್ರಿ ಎರಡು ಬೈಕ್‌ಗಳಿಗೆ ಬೆಂಕಿ, ಮುಂದುವರೆದ ಕಿಡಿಗೇಡಿ ಕೃತ್ಯ, ಗಾಂಧಿ ಬಜಾರ್‌ನಲ್ಲಿ ಆತಂಕ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಜುಲೈ 2020

ಮನೆ ಬಳಿ ನಿಲ್ಲಿಸಿರುವ ವಾಹನಗಳಿಗೆ ನಡುರಾತ್ರಿ ಬೆಂಕಿ ಹಚ್ಚುವ ಕಿಡಿಗೇಡಿಗಳ ಕೃತ್ಯ ಮುಂದುವರೆದಿದೆ. ಗಾಂಧಿ ಬಜಾರ್‍ನಲ್ಲಿ ಎರಡು ದ್ವಿಚಕ್ರ ವಾಹನಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.

ಗಾಂಧಿ ಬಜಾರ್ ಮುಖ್ಯ ರಸ್ತೆಯ ಬಂಗಾರದ ಅಂಗಡಿಯೊಂದರ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಎರಡು ವಾಹನಗಳು ಸುಟ್ಟು ಕರಕಲಾಗಿದೆ. ಬೆಂಕಿಯ ತೀವ್ರತೆಗೆ ಬಂಗಾರದ ಅಂಗಡಿಯ ಬೋರ್ಡು, ರೋಲಿಂಗ್ ಷಟರ್ ಮುಂದೆ ಇದ್ದ ರೂಫ್‍ಗಳು ಸುಟ್ಟು ಹೋಗಿವೆ.

109929348 1172562606438491 9015822878662189886 n.jpg? nc cat=105& nc sid=8024bb& nc ohc=ld7QNoWRpdAAX9bVglc& nc ht=scontent.fixe1 1

ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು. ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚೆಗೆ ಸೀಗೆಹಟ್ಟಿಯಲ್ಲಿ ನಿಲ್ಲಿಸಿದ್ದ ಆಟೋವೊಂದಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರು. ಈ ಸಂಬಂಧ ದೊಡ್ಡಪೇಟೆ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಇದಕ್ಕೂ ಮೊದಲು ಕಾರು ಮತ್ತು ಬೈಕ್‍ಗೆ ಬೆಂಕಿ ಹಚ್ಚಲಾಗಿತ್ತು. ಒಂದೆರಡು ಬಡಾವಣೆಯಲ್ಲಿ ಕಾರುಗಳ ಗಾಜು ಒಡೆದಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment