ಶಿವಮೊಗ್ಗ ಲೈವ್
ಶಿವಮೊಗ್ಗ: ಒಡ್ಡಿನಕೊಪ್ಪ ಸಮೀಪದ ಪುಟ್ಟಪ್ಪ ಕ್ಯಾಂಪ್‌ನಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುವನ್ನು (cow) ದುಷ್ಕರ್ಮಿಗಳು ಕಳ್ಳತನ ಮಾಡಿರುವ ಘಟನೆ ನಡೆದಿದೆ. ರತ್ನಮ್ಮ ಎಂಬುವವರಿಗೆ ಸೇರಿದ ಹಸು ಕಳುವಾಗಿದೆ. (ಈ ಸುದ್ದಿಯನ್ನು ಇನ್ನು 28 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ರತ್ನಮ್ಮ ಅವರು ಹಸು ಸಾಕಾಣಿಕೆ ಮಾಡಿಕೊಂಡಿದ್ದು, ಮನೆಯ ಪಕ್ಕದ ಕೊಟ್ಟಿಗೆಯಲ್ಲಿ 11 ಹಸುಗಳನ್ನು ಕಟ್ಟಿದ್ದರು. ನಡುರಾತ್ರಿ ಹಸುಗಳು ಕೊಟ್ಟಿಗೆಯಲ್ಲೇ ಇದ್ದವು. ಆದರೆ ಬೆಳಗ್ಗೆ 5 ಗಂಟೆಗೆ ಬಂದು ನೋಡಿದಾಗ ಅದರಲ್ಲಿ ಸುಮಾರು ₹20,000 ಮೌಲ್ಯದ ಕಪ್ಪು ಬಣ್ಣದ ಹಸು ಕಾಣೆಯಾಗಿರುವುದು ಗೊತ್ತಾಗಿದೆ ಎಂದು ಆರೋಪಿಸಿದ್ದಾರೆ. ಈ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿ : ಶಿವಮೊಗ್ಗದಲ್ಲಿ ಅನುಮಾನಾಸ್ಪದವಾಗಿ ಯುವಕ ಸಾವು, ತೋಟದ ಬಳಿ ಪತ್ತೆಯಾಯ್ತು ಮೃತದೇಹ