ಗಾಜನೂರು ಬಳಿ ನಾಯಿಗೆ ಡಿಕ್ಕಿ ತಪ್ಪಿಸಲು ಹೋಗಿ ಪಲ್ಟಿಯಾದ ಕಾರು, ಯುವಕ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 MAY 2024

SHIMOGA : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ (Mishap) ಯುವಕ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾನೆ. ಶಿವಮೊಗ್ಗ ತಾಲೂಕು ಗಾಜನೂರು ಸಮೀಪ ಭಾನುವಾರ ರಾತ್ರಿ ಘಟನೆ ಸಂಭವಿಸಿದೆ. ಘಟನೆಯಲ್ಲಿ ಐವರು ಗಾಯಗೊಂಡಿದ್ದಾರೆ.

ವಿದ್ಯಾನಗರ ನಿವಾಸಿ, ಕೃಷಿಕ ಕೃಷ್ಣಮೂರ್ತಿ ಅವರ ಪುತ್ರ ಪ್ರಜ್ವಲ್ (22) ಸಾವಿಗೀಡಾದ ಯುವಕ. ಕೃಷ್ಣಮೂರ್ತಿ ಮೂಲತಃ ಚನ್ನಗಿರಿ ತಾಲ್ಲೂಕಿನ ಬೆಟ್ಟದ ಕಡೂರಿನವರು. ಪ್ರಜ್ವಲ್ ಹಾಗೂ ಸ್ನೇಹಿತರು ಎರಡು ವಾಹನಗಳಲ್ಲಿ ಮಂಡಗದ್ದೆಗೆ ಊಟಕ್ಜೆ ತೆರಳಿದ್ದರು.

ಇದನ್ನೂ ಓದಿ – ಕಾಲೇಜು ಸಮೀಪ ಅಂಗಡಿಗೆ ದಿಢೀರ್‌ ಭೇಟಿ ನೀಡಿದ ಶಾಸಕ, ಖಡಕ್‌ ವಾರ್ನಿಂಗ್‌, ಕಾರಣವೇನು?

ರಾತ್ರಿ ಊಟ ಮುಗಿಸಿ ವಾಪಸ್ ಬರುವಾಗ ಕಾರಿಗೆ ನಾಯಿ ಅಡ್ಡಬಂದಿದೆ. ಅದಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸಲು ಮುಂದಾದಾಗ ಕಾರು ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment