ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಅಕ್ಟೋಬರ್ 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಹೊನ್ನಾಳಿ ತಾಲೂಕಿನ ಕೆರೆಯೊಂದರಲ್ಲಿ ನವುಲೆಯ ಕೃಷಿ ಕಾಲೇಜಿನ ಪ್ರೊಫೆಸರ್ ಒಬ್ಬರ ಮೃತದೇಹ ಪತ್ತೆಯಾಗಿದೆ. ಇತ್ತ ಪ್ರೊಫೆಸರ್ ಕಾಣೆಯಾಗಿರುವ ಕುರಿತು ಶಿವಮೊಗ್ಗದ ಪೊಲೀಸ್ ಠಾಣೆಯೊಂದರಲ್ಲಿ ಪ್ರಕರಣ ದಾಖಲಾಗಿತ್ತು.
ಕೃಷಿ ಕಾಲೇಜು ಪ್ರೊಫಸೆರ್ ಗಂಗಾಪ್ರಸಾದ್ (57) ಮೃತರು. ಹೊನ್ನಾಳಿ ತಾಲೂಕು ಚಿಕ್ಕಬಾಸೂರು ಗ್ರಾಮದ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ.
ಕೆರೆ ಏರಿ ಮೇಲೆ ಪ್ಯಾಂಟು, ಚಪ್ಪಲಿ
ಕೆರೆಯಲ್ಲಿ ಮೃತದೇಹ ತೇಲುತ್ತಿರುವ ಸಂಬಂಧ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ದಡಕ್ಕೆ ತಂದು ಗುರುತು ಪತ್ತೆಗೆ ಕ್ರಮ ಕೈಗೊಂಡಿದ್ದರು. ಮೃತ ವ್ಯಕ್ತಿಗೆ ಸೇರಿದ ಪ್ಯಾಂಟು, ಚಪ್ಪಲಿಗಳು ಕೆರೆ ಏರಿ ಮೇಲೆ ಪತ್ತೆಯಾಗಿದ್ದವು. ಇದರಲ್ಲಿದ್ದ ಕೆಲವು ದಾಖಲೆಗಳ ಆಧಾರದಲ್ಲಿ ಅವರನ್ನು ಪ್ರೊ. ಗಂಗಾಪ್ರಸಾದ್ ಎಂದು ಗುರುತಿಸಲಾಗಿದೆ.

ನಾಪತ್ತೆ ಪ್ರಕರಣ ದಾಖಲಾಗಿತ್ತು
ಪ್ರೊ.ಗಂಗಾಪ್ರಸಾದ್ ಅವರು ಕಾಣೆಯಾಗಿರುವ ಕುರಿತು ಅವರ ಪತ್ನಿ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಅ.18ರಂದು ಪ್ರೊ.ಗಂಗಾಪ್ರಸಾದ್ ಅವರು ತಮ್ಮ ಕಾರಿನಲ್ಲಿ ಕಾಲೇಜಿಗೆ ತೆರಳುವುದಾಗಿ ತಿಳಿಸಿ ಹೋಗಿದ್ದರು. ಆ ಬಳಿಕ ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಅವರು ಕಾಲೇಜಿಗೂ ಕೂಡ ಹೋಗಿರಲಿಲ್ಲ. ಇದರಿಂದ ಅನುಮಾನಗೊಂಡ ಅವರ ಕುಟುಂಬದವರು ಎಲ್ಲೆಡೆ ಕರೆ ಮಾಡಿ ವಿಚಾರಿಸಿದ್ದಾರೆ. ಎಲ್ಲಿಯೂ ಪತ್ತೆಯಾಗದ ಹಿನ್ನೆಲೆ ದೂರು ನೀಡಿದ್ದರು.

ಕೆಲ ಘಟನೆಗಳಿಂದ ಮನನೊಂದಿದ್ದರು
ಕಾಲೇಜಿನಲ್ಲಿ ಈ ಹಿಂದೆ ನಡೆದ ಒಂದು ವಿಚಾರವಾಗಿ ಪ್ರೊ.ಗಂಗಾಪ್ರಸಾದ್ ಅವರು ಮನನೊಂದಿದ್ದರು ಎಂದು ಅವರ ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ. ಇದೆ ಕಾರಣಕ್ಕೆ ಅವರು ಬೇಸರಗೊಂಡು ಎಲ್ಲಿಯಾದರೂ ಹೋಗಿರಬಹುದು ಎಂದು ಶಂಕಿಸಿದ್ದರು. ಇವತ್ತು ಪ್ರೊ.ಗಂಗಾಪ್ರಸಾದ್ ಅವರ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






