ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
THIRTHAHALLI, 2 SEPTEMBER 2024 : ವಾಟ್ಸಪ್ ಸ್ಟೇಟಸ್‌ನಲ್ಲಿ (Status) ಡೆತ್ ನೋಟ್ ಅಪ್‌ಲೋಡ್ ಮಾಡಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ತುಂಗಾ ನದಿಯ ಸ್ಮಶಾನಕಟ್ಟೆ ಬಳಿ ತುಂಗಾ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಇಂದಾವರ ಗ್ರಾಮದ ಜಯದೀಪ್ (24) ಶನಿವಾರ ನಾಪತ್ತೆಯಾಗಿದ್ದ. ಇದಕ್ಕೂ ಮೊದಲು ಮೂರು ಪುಟದ ಪತ್ರವನ್ನು ವಾಟ್ಸಪ್ ಸ್ಟೇಟಸ್‌ಗೆ ಅಪ್‌ಲೋಡ್ ಮಾಡಿದ್ದ. ಆತನ ಬೈಕ್ ತುಂಗಾ ನದಿ ದಂಡೆ ಮೇಲೆ ಪತ್ತೆಯಾಗಿತ್ತು. ಈ ಹಿನ್ನೆಲೆ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದರು. ಆದರೆ ಜಯದೀಪ್ ಪತ್ತೆಯಾಗದ ಹಿನ್ನೆಲೆ ಕಾರ್ಯಾಚರಣೆ ಸ್ಥಗಿತಗೊಂಡಿತ್ತು. ಇವತ್ತು ಜಯದೀಪ್ ಶವವಾಗಿ ಪತ್ತೆಯಾಗಿದ್ದಾನೆ. ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ ⇒ ವಾಟ್ಸಪ್ ಸ್ಟೇಟಸ್ ಹಾಕಿ ಯುವಕ ನಾಪತ್ತೆ, ತುಂಗಾ ನದಿ ಬಳಿ ಬೈಕ್ ಪತ್ತೆ, ಕುಟುಂಬದವರಲ್ಲಿ ಆತಂಕ