SHIVAMOGGA LIVE | 10 JULY 2023
SHIMOGA : ಇನ್‌ಸ್ಟಾಗ್ರಾಂನಲ್ಲಿ (Instagram) ವಿದ್ಯಾರ್ಥಿನಿಯೊಬ್ಬಳ ಹೆಸರು ಹೋಲುವಂತೆ ಖಾತೆ ಸೃಷ್ಟಿಸಿ, ಆಕೆಯ ಫೋಟೊಗಳನ್ನು ಅಪ್‌ಲೋಡ್ ಮಾಡಲಾಗಿದೆ. ಈ ಮೂಲಕ ಮಾನಸಿಕ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿನಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿನಿಯೊಬ್ಬಳ (ಹೆಸರು ಗೌಪ್ಯ) ಇನ್‌ಸ್ಟಾಗ್ರಾಂ ಖಾತೆಗೆ ಆರು ತಿಂಗಳ ಹಿಂದೆ ಆಕೆಯದ್ದೆ ಹೆಸರಿನ ಎರಡು ಪ್ರತ್ಯೇಕ ಇನ್‌ಸ್ಟಾಗ್ರಾಂ (Instagram) ಖಾತೆಗಳಿಂದ ಫ್ರೆಂಡ್ ರಿಕ್ವೆಸ್ಟ್ ಬಂದಿತ್ತು. ರಿಕ್ವೆಸ್ಟ್ ಅಕ್ಸೆಪ್ಟ್ ಮಾಡುವ ಬದಲು ಖಾತೆಯನ್ನು ಪರಿಶೀಲಿಸಿದಾಗ ವಿದ್ಯಾರ್ಥಿನಿಯ ಫೋಟೊಗಳನ್ನು ಅಪ್‌ಲೋಡ್ ಮಾಡಲಾಗಿತ್ತು. ಸಂಬಂಧಿಕರು ಯಾರೋ ತಮಾಷೆಗಾಗಿ ಈ ರೀತಿ ಮಾಡುತ್ತಿರಬಹುದು ಎಂದು ಪರಿಶೀಲನೆ ನಡೆಸಿದಾಗ ಯಾರೂ ಇನ್‌ಸ್ಟಾಗ್ರಾಂ ಖಾತೆ ತೆಗೆದಿಲ್ಲ ಅನ್ನುವುದು ಖಚಿತವಾಗಿದೆ.
ತನ್ನ ಹೆಸರು ಮತ್ತು ಅನುಮತಿ ಇಲ್ಲದೆ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿ, ಮಾನಸಿಕ ಕಿರಿಕುಳ ನೀಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿನಿ ದೂರು ನೀಡಿದ್ದಾರೆ. ಸಿಇಎನ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಅನುಮತಿ ಇಲ್ಲದೆ ಫೋಟೊ ಬಳಸುವಂತಿಲ್ಲ
ಸಾಮಾಜಿಕ ಜಾಲತಾಣದಲ್ಲಿ ಅನುಮತಿ ಇಲ್ಲದೆ ಯಾರೆಂದರ ಅವರ ಫೋಟೊಗಳನ್ನು ಬಳಸುವಂತಿಲ್ಲ. ಅನುಮತಿ ಇಲ್ಲದೆ ಫೋಟೊಗಳನ್ನು ಉಪಯೋಗಿಸುವುದು ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿ ಅಪರಾಧವಾಗಲಿದೆ. ಇನ್ನು, ನಕಲಿ ಖಾತೆಗಳನ್ನು ಸೃಷ್ಟಿಸುವುದು ಕೂಡ ಶಿಕ್ಷಾರ್ಹವಾಗಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 66ರ ಅಡಿಯಲ್ಲಿ ಪ್ರಕರಣ ದಾಖಲಿಸಬಹುದಾಗಿದೆ. ಆರೋಪ ಸಾಬೀತಾದರೆ ಜೈಲು ಶಿಕ್ಷೆಯಾಗಲಿದೆ.
ಇದನ್ನೂ ಓದಿ – ಮಲೇಷಿಯಾ, ಸೇಲಂಗಿಂತಲು ಶಿವಮೊಗ್ಗದಲ್ಲಿ ಅತಿ ಎತ್ತರದ ಪ್ರತಿಮೆ, ಹೇಗಿರುತ್ತೆ? ಇಲ್ಲಿದೆ 7 ಪ್ರಮುಖ ವಿಶೇಷತೆ
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






