ಕಾಡಿನ ಮಧ್ಯೆ ಸುಟ್ಟ ಕಾರು, ಅಸ್ಥಿ ಪಂಜರ ಪತ್ತೆ ಕೇಸ್’ಗೆ ರೋಚಕ ಟ್ವಿಸ್ಟ್, ಮನೆಯಲ್ಲೇ ಇದ್ದರು ಹಂತಕರು, ಐವರು ಅರೆಸ್ಟ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 01 ಅಕ್ಟೋಬರ್ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ತೀರ್ಥಹಳ್ಳಿ ತಾಲೂಕು ಮಿಟ್ಲಗೋಡು ಅರಣ್ಯ ವ್ಯಾಪ್ತಿಯಲ್ಲಿ ಸುಟ್ಟು ಕರಕಲಾಗಿದ್ದ ಕಾರು ಮತ್ತು ಅಸ್ಥಿ ಪಂಜರ ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಈಗ ರೋಚಕ ಟ್ವಿಸ್ಟ್ ಸಿಕ್ಕಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿದ್ದು, ಕೊಲೆಗಾರರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಮೃತ ವ್ಯಕ್ತಿ ಯಾರು?

ಮೃತನನ್ನು ಸಾಗರ ತಾಲೂಕಿನ ಆಚಾಪುರ ಗ್ರಾಮದ ಮುಸ್ಲಿಂಪೇಟೆಯ ನಿವಾಸಿ ವಿನೋದ್ (45) ಎಂದು ಗುರುತಿಸಲಾಗಿದೆ. ವಿನೋದ್ ಅವರನ್ನು ಕೊಲೆಗೈದು ಕಾಡಿನಲ್ಲಿ ಕಾರು ನಿಲ್ಲಿಸಿ ಬೆಂಕಿ ಹಚ್ಚಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.

ಹೆಂಡತಿ, ಮಕ್ಕಳು, ತಮ್ಮನೇ ಕೊಲೆಗಾರರು

ಸುಟ್ಟ ಕಾರು, ಅಸ್ಥಿ ಪಂಜರ ಪತ್ತೆಯಾಗಿರುವ ಸಂಬಂಧ ಜೇಡಿಕುಣಿ ಗ್ರಾಮ ಪಂಚಾಯಿತಿ ಸದಸ್ಯರು ದೂರು ನೀಡಿದ್ದರು. ತನಿಖೆ ನಡೆಸಿದ ತೀರ್ಥಹಳ್ಳಿ ಪೊಲೀಸರಿಗೆ ಮೃತ ವಿನೋದ್’ನ ಹೆಂಡತಿ, ಇಬ್ಬರು ಗಂಡು ಮಕ್ಕಳು, ಹೆಂಡತಿಯ ಅಕ್ಕನ ಮಗ ಮತ್ತು ಮೃತನ ತಮ್ಮನ ಕೈವಾಡ ಇರುವುದು ತಿಳಿದು ಬಂದಿತ್ತು.

NH nephrolody%2Bad %2Bkannada 10

ಹತ್ಯೆ ಮಾಡಿದ್ದೇಕೆ, ಹೇಗೆ ನಡೆಯಿತು ಕೃತ್ಯ?

ಕೌಟುಂಬಿಕ ಕಲಹದ ಹಿನ್ನೆಲೆ ವಿನೋದ್’ನ ಹತ್ಯೆಯಾಗಿದೆ ಎಂದು ತಿಳಿದು ಬಂದಿದೆ. ಇದೆ ಆಧಾರದಲ್ಲಿ ತನಿಖೆ ನಡೆಸಿದಾಗ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಸೆಪ್ಟೆಂಬರ್ 25ರಂದು ಐವರು ಆರೋಪಿಗಳು ವಿನೋದ್ ಕೊಲೆಗೆ ಸಂಚು ರೂಪಿಸಿದ್ದಾರೆ. ಸೆಪ್ಟೆಂಬರ್ 26ರಂದು ಬೆಳಗ್ಗೆ ಆನಂದಪುರದ ಪೆಟ್ರೋಲ್ ಬಂಕ್’ನಲ್ಲಿ ಪೆಟ್ರೋಲ್ ಖರೀದಿಸಿಟ್ಟುಕೊಂಡಿದ್ದರು.

ಸೆ.26ರಂದು ರಾತ್ರಿ 8.30ರ ಹೊತ್ತಿಗೆ ಮನೆಯಲ್ಲೇ ತಂತಿ ಬಿಗಿಯುವ ರಾಡ್, ಸುತ್ತಿಗೆ, ಕಬ್ಬಿಣದ ಪೈಪ್ ರಾಡ್’ನಿಂದ ಹೊಡೆದು ವಿನೋದ್ ಅವರ ಕೊಲೆ ಮಾಡಲಾಗಿದೆ.

1632381434119645 4

ವಿನೋದ್ ಬಳಸುತ್ತಿದ್ದ ಕಾರಿನಲ್ಲೇ ಅವರ ಮೃತದೇಹವನ್ನು ಸಾಗಿಸಲಾಗಿದೆ. ತನಿಖೆ ವೇಳೆ ಪೊಲೀಸರಿಗೆ ಅನುಮಾನ ಬಾರದಿರಲಿ ಎಂದು, ಆರೋಪಿಗಳು ತಮ್ಮ ಮೊಬೈಲನ್ನು ಸ್ವಿಚ್ ಆಫ್ ಮಾಡಿದ್ದರು. ಮನೆಯಲ್ಲೇ ಮೊಬೈಲ್’ಗಳನ್ನು ಇಟ್ಟು ಹೋಗಿದ್ದರು.

ಕಾರಿನಲ್ಲಿ ಯಡೇಹಳ್ಳಿ, ರಿಪ್ಪನ್ ಪೇಟೆ, ಹುಂಚದಕಟ್ಟೆ, ಶಂಕ್ರಳ್ಳಿ, ಮಲ್ಲೇಸರ ಮಾರ್ಗವಾಗಿ ತೀರ್ಥಹಳ್ಳಿ ತಾಲೂಕು ಮಿಟ್ಲಗೋಡು ಗ್ರಾಮದ ಹುಣಸೆಕೊಪ್ಪ ಅರಣ್ಯ ಪ್ರದೇಶಕ್ಕೆ ಮೃತದೇಹ ತಂದಿದ್ದಾರೆ. ಚಾಲಕನ ಸೀಟಿನಲ್ಲಿ ಮೃತದೇವನ್ನು ಇರಿಸಿದ್ದಾರೆ. ಮೊದಲೆ ಖರೀದಿಸಿಟ್ಟಿದ್ದ ಪೆಟ್ರೋಲ್ ಸುರಿದು ಕಾರಿಗೆ ಬೆಂಕಿ ಹಚ್ಚಿದ್ದಾರೆ.

ಕಾರಿನ ನಂಬರ್ ಪ್ಲೇಟ್ ಮತ್ತು ವಿನೋದ್ ಬಳಸುತ್ತಿದ್ದ ಮೊಬೈಲ್ ಫೋನನ್ನು ದಾರಿ ಮಧ್ಯೆ ಎಸೆದು ಆರೋಪಿಗಳು ಮನೆಗೆ ಮರಳಿದ್ದರು.

ಪೊಲೀಸರಿಗೆ ಅನುಮಾನ ಬಾರದಿರಲಿ ಎಂದು ಕೊಲೆ ಮಾಡಿದ್ದ ಜಾಗವನ್ನು ಫಿನಾಯಲ್ ಬಳಸಿ ಸ್ವಚ್ಛಗೊಳಿಸಿದ್ದರು. ಇದಿಷ್ಟೆ ಅಲ್ಲ, ಕೃತ್ಯದ ವೇಳೆ ಆರೋಪಿಗಳು ಬಳಸಿದ್ದ ಬಟ್ಟೆ, ಚಪ್ಪಲಿಗಳನ್ನು ಮನೆಯ ಹಿಂಭಾಗದಲ್ಲಿ ಸುಟ್ಟು ಹಾಕಿದ್ದರು.

ತನಿಖೆ ವೇಳೆ ಮನೆಯವರ ಮೇಲೆಯೇ ಅನುಮಾನಗೊಂಡ ಪೊಲೀಸರು, ವಿಚಾರಣೆ ತೀವ್ರಗೊಳಿಸಿದ್ದರು. ಈ ವೇಳೆ ವಿನೋದ್ ಕೊಲೆಯ ಸಂಪೂರ್ಣ ಮಾಹಿತಿ ಬಹಿರಂಗಗೊಂಡಿದೆ. ಪೊಲೀಸರು ಐವರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

1632381439867456 3

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment