ಶಿವಮೊಗ್ಗ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಯ ಹತ್ಯೆಯ ವಿಚಾರ ತಿಳಿಯುತ್ತಿದ್ದಂತೆ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ್ದರು. ಶವಾಗಾರದಲ್ಲಿ ಸಂಕೇತ್ ಅವರ ಮೃತದೇಹದ ಅಂತಿಮ ದರ್ಶನ ಪಡೆದರು. ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು. (police)
ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮಾಧ್ಯಮಗಳಿಗ ಪ್ರತಿಕ್ರಿಯೆ ನೀಡಿದರು. ವಿಶೇಷ ತರಗತಿ ಮುಗಿಸಿ ಮನೆಗೆ ಮರಳುತ್ತಿದ್ದ ಬಾಲಕನ ಮೇಲೆ ಗುಂಪೊಂದು ಬಂದು ದಾಳಿ ನಡೆಸಿ ಕೊಲೆ ಮಾಡಿರುವುದು ಅತ್ಯಂತ ನೋವಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.
ಸೂಳೆಬೈಲು ಭಾಗವು ಮೊದಲಿನಿಂದಲೂ ಸೂಕ್ಷ್ಮ ಪ್ರದೇಶವಾಗಿದೆ. ಪದೇ ಪದೆ ಇಂತಹ ಘಟನೆಗಳು ನಡೆಯುತ್ತಿದ್ದರೂ ಪೊಲೀಸ್ ಇಲಾಖೆ ಸರಿಯಾದ ಕ್ರಮ ಕೈಗೊಳ್ಳುತ್ತಿಲ್ಲ. ಪೊಲೀಸ್ ಇಲಾಖೆ ಇರುವುದು ಹಿಂದೂ ಹುಡುಗರ ಹೆಣ ಹೊರಲಿಕ್ಕಾ. ಪೊಲೀಸರು ಆರೋಪಿಗಳನ್ನು ಬಂಧಿಸುತ್ತೇವೆ ಎಂಬ ಸಿದ್ಧ ಉತ್ತರ ನೀಡುತ್ತಿದ್ದಾರೆ. ಆದರೆ ಹೋದ ಜೀವವನ್ನು ಮರಳಿ ತರಲು ಸಾಧ್ಯವೇ? ಎಂದು ಪ್ರಶ್ನಿಸಿದರು.

ಕೆಲವು ಹಬ್ಬಗಳ ಸಮಯದಲ್ಲಿ ಕಿಡಿಗೇಡಿಗಳು ಬೈಕ್‌ಗಳಲ್ಲಿ ಗುಂಪು ಗುಂಪಾಗಿ ಬಂದು ದಾಂಧಲೆ ನಡೆಸುತ್ತಿರುವ ಬಗ್ಗೆ ಈ ಮೊದಲೇ ದೂರು ನೀಡಿದ್ದರೂ, ಅದನ್ನು ಲಘುವಾಗಿ ಪರಿಗಣಿಸಿದ್ದೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಿದರು.
ಸೂಚನೆ: ಜುವೆನೈಲ್ ಜಸ್ಟಿಸ್ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯಿದೆ, 2015, ಸೆಕ್ಷನ್ 74: ಅಪರಾಧದಲ್ಲಿ ಭಾಗಿಯಾದ ಅಪ್ರಾಪ್ತರ ಹೆಸರು, ವಿಳಾಸ ಅಥವಾ ಭಾವಚಿತ್ರವನ್ನು ಮಾಧ್ಯಮಗಳಲ್ಲಿ ಬಹಿರಂಗಪಡಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಆದ್ದರಿಂದ ಈ ಸುದ್ದಿಯಲ್ಲಿ ಸಂತ್ರಸ್ತ ಬಾಲಕನ ಹಸರು ಹೊರತು ಉಳಿದ ವಿವರಣೆಗಳನ್ನು ಪ್ರಕಟಿಸುತ್ತಿಲ್ಲ.
ಇದನ್ನೂ ಓದಿ – ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಹತ್ಯೆ ಕೇಸ್, ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಮೊದಲ ಪ್ರತಿಕ್ರಿಯೆ, ಏನಂದ್ರು?

About The Editor
ನಿತಿನ್ ಆರ್.ಕೈದೊಟ್ಲು






