ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಸೋಗಾನೆಯ ಕೇಂದ್ರ ಕಾರಾಗೃಹದ ಖೈದಿಯೊಬ್ಬನ (Inmate) ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಿ ಮೊಬೈಲ್ ಫೋನ್ ಹೊರಗೆ ತೆಗೆಯಲಾಗಿದೆ.
ಖೈದಿ ದೌಲತ್ ಅಲಿಯಾಸ್ ಗುಂಡ (30) ಎಂಬಾತನ ಹೊಟ್ಟೆಯಲ್ಲಿ ಒಂದು ಇಂಚು ಅಗಲದ, ಮೂರು ಇಂಚು ಉದ್ದದ ಮೊಬೈಲ್ ಫೋನ್ ಪತ್ತೆಯಾಗಿದೆ.

ಕಲ್ಲು ನುಂಗಿದ್ದೀನಿ ಅಂತಾ ಆಸ್ಪತ್ರೆಗೆ ಬಂದ
ಪ್ರಕರಣವೊಂದರಲ್ಲಿ ದೌಲತ್ ಅಲಿಯಾಸ್ ಗುಂಡನಿಗೆ ಶಿವಮೊಗ್ಗದ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈತ ಜೂನ್ 24ರಂದು ಜೈಲಿನ ಆಸ್ಪತ್ರೆಗೆ ಬಂದು, ತಾನು ಕಲ್ಲು ನುಂಗಿದ್ದೇನೆ ಎಂದು ವೈದ್ಯರಿಗೆ ತಿಳಿಸಿದ್ದ. ಪರೀಕ್ಷಿಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದರು. ಎಕ್ಸ್‌ರೇ ಮಾಡಿದಾಗ ಖೈದಿ ದೌಲತ್‌ನ ಹೊಟ್ಟೆಯಲ್ಲಿ ಹೊರಗಿನ ವಸ್ತು ಇರುವುದು ಗೊತ್ತಾಗಿತ್ತು. ಶಸ್ತ್ರಚಿಕಿತ್ಸೆ ನಡೆಸಿದಾಗ ಮೊಬೈಲ್ ಫೋನ್ ಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ » ಪತ್ನಿಯ ಮೂಗನ್ನೆ ಕಚ್ಚಿ ತುಂಡರಿಸಿದ ಪತಿ, ಶಿವಮೊಗ್ಗದ ಆಸ್ಪತ್ರೆಗೆ ದಾಖಲಾದ ಮಹಿಳೆ
ನಿಷೇಧವಿದ್ದರು ಜೈಲಿನೊಳಗೆ ಮೊಬೈಲ್ ಫೋನ್ ತಲುಪಿರುವ ಕುರಿತು ತನಿಖೆ ನಡೆಸುವಂತೆ ಕೇಂದ್ರ ಕಾರಾಗೃಹದ ಅಧೀಕ್ಷಕ ರಂಗನಾಥ್.ಪಿ ಅವರು ದೂರು ನೀಡಿದ್ದಾರೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















