ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ
ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಸೆಪ್ಟೆಂಬರ್ 2021
ಶಿವಮೊಗ್ಗದ ಖಾಸಗಿ ಶಾಲೆಯ ಸೆಕ್ಯೂರಿಟಿ ಗಾರ್ಡ್ ಒಬ್ಬರನ್ನು ಅಡ್ಡಗಟ್ಟಿ ಮೊಬೈಲ್ ಕಳ್ಳತನ ಮಾಡಲಾಗಿದೆ. ಸವಳಂಗ ರಸ್ತೆಯಲ್ಲಿ ಕೃತ್ಯ ನಡೆದಿದೆ.
ಮಣಿಕಂಠ ಎಂಬುವವರ ಮೊಬೈಲ್ ಕಳ್ಳತನ ಮಾಡಲಾಗಿದೆ. ಈ ಸಂಬಂಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಏನಿದು ಕೇಸ್? ಹೇಗಾಯ್ತು ಕೃತ್ಯ?
ಖಾಸಗಿ ಶಾಲೆಯೊಂದರಲ್ಲಿ ಮಣಿಕಂಠ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದಾರೆ. ಸೆಪ್ಟೆಂಬರ್ 19ರಂದು ರಾತ್ರಿ ಸಮೀಪದ ಖಾನಾವಳಿಯೊಂದರಲ್ಲಿ ಮಣಿಕಂಠ ಊಟ ಮುಗಿಸಿಕೊಂಡು ಶಾಲೆ ಕಡೆಗೆ ತೆರಳುತ್ತಿದ್ದರು.

ಸವಳಂಗ ರಸ್ತೆಯಲ್ಲಿ ಹೋಗುತ್ತಿದ್ದಾಗ ಬೈಕ್’ನಲ್ಲಿ ಬಂದ ಮೂವರು ಮಣಿಕಂಠನನ್ನು ಅಡ್ಡಗಟ್ಟಿದ್ದಾರೆ. ಆತನ ಬಳಿಯಿದ್ದ ಮೊಬೈಲನ್ನು ಕೊಡುವಂತೆ ಬೆದರಿಕೆ ಒಡ್ಡಿದ್ದಾರೆ. ಮೊಬೈಲ್ ಕಸಿದುಕೊಳ್ಳುತ್ತಿದ್ದಂತೆ ಮಣಿಕಂಠ ಜೋರಾಗಿ ಕೂಗಿಕೊಂಡಿದ್ದು, ಬೈಕ್’ನಲ್ಲಿ ಬಂದ ಮೂವರು ಮೊಬೈಲ್’ನೊಂದಿಗೆ ಪರಾರಿಯಾಗಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಅಚ್ಚುಕಟ್ಟಾದ ಮನೆಗೆ ಅಚ್ಚುಕಟ್ಟಾದ ಪೀಠೋಪಕರಣ. ಶಿವಮೊಗ್ಗದಲ್ಲಿ @HOME ಶೋರೂಂ. ಒಮ್ಮೆ ಭೇಟಿ ಕೊಡಿ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200


