ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 3 JUNE 2024
SAGARA : ನೈಋತ್ಯ ಪದವೀಧರರ ಕ್ಷೇತ್ರದ ಚುನಾವಣೆಗೆ ಮತ ಚಲಾಯಿಸಲು ತೆರಳಿದ್ದ ಸಂದರ್ಭ ಮತಗಟ್ಟೆಯಲ್ಲಿ ಉದ್ಯಮಿಯೊಬ್ಬರ ಮೊಬೈಲ್ (Mobile Theft) ಕಳ್ಳತನವಾಗಿದೆ. ಸಾಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮತಗಟ್ಟೆಯಲ್ಲಿ ಉದ್ಯಮಿ ವಿನಯ್ ಎಂಬುವವರು ಮತ ಚಲಾಯಿಸಲು ತೆರಳಿದ್ದರು. ಮತ ಚಲಾಯಿಸುವ ಕೊಠಡಿಯೊಳಗೆ ಮೊಬೈಲ್ ಕೊಂಡೊಯ್ಯುವಂತಿಲ್ಲ ಎಂದು ಸಿಬ್ಬಂದಿ ತಿಳಿಸಿದ್ದರು.
ಸಿಬ್ಬಂದಿ ಸೂಚಿಸಿದ ಜಾಗದಲ್ಲಿ ಉದ್ಯಮಿ ವಿನಯ್ ಮೊಬೈಲ್ ಇಟ್ಟು ಹೋಗಿ ಮತ ಚಲಾಯಿಸಿದ್ದರು. ಕೊಠಡಿಯಿಂದ ಹೊರ ಬಂದಾಗ ವಿನಯ್ ಅವರ ಮೊಬೈಲ್ ನಾಪತ್ತೆಯಾಗಿತ್ತು. ಸಿಬ್ಬಂದಿಯನ್ನು ವಿಚಾರಿಸಿದಾಗ ತಮಗೆ ಗೊತ್ತಿಲ್ಲ ಎಂದು ತಿಳಿಸಿದ್ದಾರೆ. ಸಿಸಿಟಿವಿ ಕ್ಯಾಮರಾ ಇದ್ದರೂ ಕಾರ್ಯಾಚರಿಸುತ್ತಿಲ್ಲ ಎಂಬ ಸಬೂಬು ಹೇಳಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ವಿನಯ್ ಅವರು ಸಾಗರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ – ಮಟನ್ ಬದಲು ಮೂಳೆಯೇ ಹೆಚ್ಚಾಗಿದೆ ಅಂದಿದ್ದಕ್ಕೆ ಗ್ರಾಹಕನ ಮೇಲೆ ಅಪ್ರಾಪ್ತನಿಂದ ಮಾರಣಾಂತಿಕ ಅಟ್ಯಾಕ್
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






