ಶಿವಮೊಗ್ಗದ ಲೈವ್.ಕಾಂ | BHADRAVATHI NEWS | 31 ಡಿಸೆಂಬರ್ 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಮಹಾರಾಷ್ಟ್ರ ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ ಮೊಬೈಲ್ ಫೋನ್’ಗಳನ್ನು ಭದ್ರಾವತಿಯಲ್ಲಿ ಹಂಚಿಕೊಳ್ಳುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಒಬ್ಬನನ್ನು ಬಂಧಿಸಲಾಗಿದ್ದು, ಮತ್ತಿಬ್ಬರು ಪರಾರಿಯಾಗಿದ್ದಾರೆ.
ಭದ್ರಾವತಿ ಆನ್ವರ್ ಕಾಲೋನಿಯ ಸೈಯದ್ ಅಲ್ವಿ (25) ಬಂಧಿತ. ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯ ಸಂತೆ ಮೈದಾನದಲ್ಲಿ ಕದ್ದ ಮೊಬೈಲ್’ಗಳನ್ನು ಮೂವರು ಹಂಚಿಕೊಳ್ಳುತ್ತಿದ್ದ ಸಂದರ್ಭ ಪೊಲೀಸರು ದಾಳಿ ನಡೆಸಿದ್ದಾರೆ.
ರಾಶಿ ರಾಶಿ ಮೊಬೈಲ್’ಗಳು
ಪ್ರೊಬೆಷನರಿ ಡಿವೈಎಸ್’ಪಿ ಗಜಾನನ ಸತಾರ್ ಅವರು ಗಸ್ತು ತಿರುಗುತ್ತಿದ್ದ ಸಂದರ್ಭ, ಸಂತೆ ಮೈದಾನದಲ್ಲಿ ದಾಳಿ ನಡೆಸಿದ್ದಾರೆ.
ಬಂಧಿತ ಸೈಯದ್ ಅಲ್ವಿಯಿಂದ ವಿವಿಧ ಕಂಪನಿಯ 55 ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ. ಇವುಗಳ ಮೌಲ್ಯ 6,68,400 ರೂ. ಎಂದು ಅಂದಾಜು ಮಾಡಲಾಗಿದೆ. ಮಹಾರಾಷ್ಟ್ರ ರಾಜ್ಯದ ವಿವಿಧೆಡೆ ಮೊಬೈಲ್ ಫೋನ್’ಗಳನ್ನು ಕಳವು ಮಾಡಿ ತರಲಾಗಿದೆ.
ಹೊಸಮನೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮತ್ತಿಬ್ಬರಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.
ಇದನ್ನೂ ಓದಿ | ಭದ್ರಾವತಿಯಲ್ಲಿ ಬೈಕ್ ಸವಾರರ ಬ್ಯಾಗ್’ನಲ್ಲಿ ಸಿಕ್ತು ರಾಶಿ ರಾಶಿ ಮೊಬೈಲ್

LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






