ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ
ಶಿವಮೊಗ್ಗ ಲೈವ್.ಕಾಂ | SHIMOGA NEWS | 13 MARCH 2021
ಶಿವಮೊಗ್ಗ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಬಳಿ ಯುವಕರ ಗುಂಪೊಂದು ವ್ಯಕ್ತಿಯೊಬ್ಬರ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದೆ. ಈ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೇಗಾಯ್ತು ಘಟನೆ?
ಫೋಟೊಗ್ರಾಫರ್ ಮಧುಸೂದನ್ ಅವರು ಮೈಸೂರಿಗೆ ಹೋಗಲು ಬೆಳಗಿನ ಜಾವ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಕ್ಕೆ ತೆರಳುತ್ತಿದ್ದರು. ಸ್ನೇಹಿತರೊಬ್ಬರು ಬೈಕ್‍ನಲ್ಲಿ ಮಧುಸೂದನ್ ಅವರನ್ನು ಬಸ್ ನಿಲ್ದಾಣದ ಮುಂದೆ ಇರುವ ಲೋಕಾಯುಕ್ತ ಠಾಣೆ ಮುಂದೆ ಬಿಟ್ಟು ತೆರಳಿದರು.
ಸ್ನೇಹಿತ ತೆರಳುತ್ತಿದ್ದಂತೆ, ಎದುರಿನಿಂದ ಬಂದ ನಾಲ್ವರು ಯುವಕರು ಮಧುಸೂದನ್ ಅವರ ಜೇಬಿನಲ್ಲಿದ್ದ 11 ಸಾವಿರ ರೂ. ಮೌಲ್ಯದ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com


