ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 22 FEBRUARY 2021
ಕದ್ದ ಮೊಬೈಲ್ಗಳನ್ನು ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದ ಬಳಿ ಮಾರಾಟ ಮಾಡುತ್ತಿದ್ದ ಯುವಕನೊಬ್ಬ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಬಂಧಿತನಿಂದ ಆರು ಮೊಬೈಲ್ಗಳನ್ನು ವಶಕ್ಕೆ ಪಡೆಯಲಾಗಿದೆ.
ಶಿವಮೊಗ್ಗದ ಹೊಸಮನೆ ಬಡಾವಣೆಯ ವಿಶಾಲ್ (18) ಬಂಧಿತ. ಭದ್ರಾವತಿ, ಶಿವಮೊಗ್ಗದ ವಿವಿಧೆಡೆ ಮೊಬೈಲ್ ಕಳ್ಳತನ ಮಾಡಿದ್ದು, ಅವುಗಳನ್ನು ಮಾರಲು ಯತ್ನಿಸುತ್ತಿದ್ದ. ಈ ವೇಳೆ ಪೊಲೀಸರು ದಾಳಿ ನಡೆಸಿ, ವಿಶಾಲ್ನನ್ನು ಬಂಧಿಸಿದ್ದಾರೆ.
ಸಿಕ್ಕಿಬಿದ್ದಿದ್ದು ಹೇಗೆ?
ಖಾಸಗಿ ಬಸ್ ನಿಲ್ದಾಣದ ಹಿಂಭಾಗದ ಇಂದಿರಾ ಕ್ಯಾಂಟೀನ್ ಬಳಿ ಮೊಬೈಲ್ಗಳ ಮಾರಾಟಕ್ಕೆ ಪ್ರಯತ್ನಿಸುತ್ತಿದ್ದ. ಸ್ಥಳೀಯರೊಬ್ಬರು ಈ ಬಗ್ಗೆ ಮಾಹಿತಿ ನೀಡಿದ್ದು, ಕೂಡಲೆ ಸ್ಥಳಕ್ಕೆ ಧಾವಿಸಿದ ಪೊಲೀಸರು ವಿಶಾಲ್ನನ್ನು ಹಿಡಿದಿದ್ದಾರೆ. ಆತನ ಬಳಿ ಇದ್ದ ಮೊಬೈಲ್ಗಳನ್ನು ವಶಕ್ಕೆ ಪಡೆದು ದಾಖಲೆಗಳನ್ನು ಕೇಳಿದಾಗ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ.
ಇದನ್ನೂ ಓದಿ | ಕೌನ್ ಬನೇಗಾ ಕರೋಡ್ಪತಿ ಹೆಸರಲ್ಲಿ ತೀರ್ಥಹಳ್ಳಿಯ ವ್ಯಕ್ತಿಯೊಬ್ಬರಿಗೆ 1.43 ಲಕ್ಷ ರೂ. ವಂಚನೆ, ವಂಚಿಸಿದ್ದು ಹೇಗೆ?
ಹಣದ ಅವಶ್ಯಕತೆ ಇದ್ದುದ್ದರಿಂದ ಮೊಬೈಲ್ಗಳನ್ನು ಮಾರಾಟ ಮಾಡುತ್ತಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ಎರಡು ಸ್ಯಾಮ್ ಸಂಗ್ ಮೊಬೈಲ್ಗಳು, ರೆಡ್ ಮಿ ಕಂಪನಿಯ ಎರಡು, ಟೆಕ್ನೊ, ಜಿಓನಿ ಕಂಪನಿಯ ಮೊಬೈಲ್ಗಳನ್ನು ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ | ಬೈಕ್ನಲ್ಲಿ ಲಾಂಗ್ ತಂದು, ಪದೇ ಪದೇ ಹೊರ ತೆಗೆದು ಜನರಲ್ಲಿ ಆತಂಕ ಮೂಡಿಸುತ್ತಿದ್ದವನು ಜೈಲಿಗೆ, ಯಾರವನು?
ದೊಡ್ಡಪೇಟೆ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಮೊಬೈಲ್ ಕಳ್ಳನನ್ನು ಬಂಧಿಸಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ದುರಸ್ತಿ ವೇಳೆ ಲೈನ್ ಮ್ಯಾನ್ಗೆ ಕರೆಂಟ್ ಶಾಕ್, ಸ್ಥಳದಲ್ಲೆ ಸಾವು

- ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

- ಉಪನ್ಯಾಸಕ ಸುರೇಶ್ ನಿಗೂಢ ಸಾವು ಕೇಸ್, ಶಿವಮೊಗ್ಗ SP ಫಸ್ಟ್ ರಿಯಾಕ್ಷನ್, ಏನಂದ್ರು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

- ಟಾಟಾ ಏಸ್, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

About The Editor
ನಿತಿನ್ ಆರ್.ಕೈದೊಟ್ಲು
















