ಶಿವಮೊಗ್ಗದಲ್ಲಿ ಮೊಬೈಲ್‌ ಟವರ್‌ ಕಳ್ಳತನ, ಖಾಲಿ ಜಾಗದಲ್ಲಿದ್ದದ್ದು ದಿಢೀರ್‌ ನಾಪತ್ತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 23 OCTOBER 2024 : ಖಾಲಿ ಜಾಗದಲ್ಲಿ ಅಳವಡಿಸಿದ್ದ ಮೊಬೈಲ್‌ ಟವರ್‌ (Tower) ಕಳ್ಳತನವಾಗಿದೆ. ಈ ಸಂಬಂಧ ಶಿವಮೊಗ್ಗದಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಟಿಪ್ಪು ನಗರದ ಖಾಲಿ ಜಾಗದಲ್ಲಿ ಖಾಸಗಿ ಸಂಸ್ಥೆಯೊಂದು 2008ರಲ್ಲಿ ಮೊಬೈಲ್‌ ಟವರ್‌ ಅಳವಡಿಸಿತ್ತು. ಅದೇ ಸಂಸ್ಥೆ ಟವರ್‌ನ ನಿರ್ವಹಣೆ ಮಾಡುತ್ತಿತ್ತು. ಕೋವಿಡ್‌ ಸಂದರ್ಭ ನಿರ್ವಹಣೆ ಸಾಧ್ಯವಾಗಿರಲಿಲ್ಲ. ಆ ಬಳಿಕ ಸಂಸ್ಥೆಯವರು ಸ್ಥಳಕ್ಕೆ ಬಂದಾಗ ಮೊಬೈಲ್‌ ಟವರ್‌ ಮತ್ತು ಅದಕ್ಕೆ ಅಳವಡಿಸಿದ್ದ ಬಿಡಿ ಭಾಗಗಳೆ ನಾಪತ್ತೆಯಾಗಿದ್ದವು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Crime-News-General-Image

ಇದನ್ನೂ ಓದಿ » ಗೌರಿ ಹಂತಕರಿಗೆ ಸನ್ಮಾನ, ಶಿವಮೊಗ್ಗದಲ್ಲಿ ಆಕ್ರೋಶ, ಜಾಮೀನು ವಜಾಗೆ ಆಗ್ರಹ

ಈ ಸಂಬಂಧ ಖಾಸಗಿ ಸಂಸ್ಥೆ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿತ್ತು. ಈಗ ನ್ಯಾಯಾಲಯದ ಸೂಚನೆ ಮೇರೆಗೆ ತುಂಗಾ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಟವರ್‌ ಮತ್ತು ಬಿಡಿ ಭಾಗಗಳ ಅಂದಾಜು ಮೌಲ್ಯ 46.30 ಲಕ್ಷ ರೂ. ಎಂದು ಉಲ್ಲೇಖಿಸಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment