ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನಿಂದ ಕಂತೆ ಕಂತೆ ಹಣ (Money), ಲಕ್ಷಾಂತರ ಮೌಲ್ಯದ ಆಭರಣಗಳನ್ನು ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗದ ಗೋಪಾಲಗೌಡ ಬಡಾವಣೆಯ ಸಿ ಬ್ಲಾಕ್‌ನ ಮನೆಯೊಂದರಲ್ಲಿ ಸೆ.17ರಂದು ಹಗಲು ಹೊತ್ತಿನಲ್ಲೆ ಕಳ್ಳತನವಾಗಿತ್ತು. ತನಿಖೆ ನಡೆಸಿದ ಪೊಲೀಸರು ಗೋಪಾಳ ನಿವಾಸಿ ಆಟೋ ಚಾಲಕ ಅಶ್ರಫ್ ವುಲ್ಲಾ (35) ಎಂಬಾತನನ್ನು ಬಂಧಿಸಿದ್ದಾರೆ. ಈತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಬಂಧಿತನಿಂದ ₹22.74 ಲಕ್ಷ ನಗದು, ₹11.70 ಲಕ್ಷ ಮೌಲ್ಯದ 130 ಗ್ರಾಂ ಚಿನ್ನದ ಆಭರಣ, ₹65 ಸಾವಿರ ಮೌಲ್ಯದ 550 ಗ್ರಾಂ ಬೆಳ್ಳಿ ಅಭರಣ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇನ್ಸ್‌ಪೆಕ್ಟರ್ ಕೆ.ಟಿ.ಗುರುರಾಜ್, ಸಿಬ್ಬಂದಿ ಕಿರಣ್ ಮೋರೆ, ಅರುಣ್ ಕುಮಾರ, ಮೋಹನ್ ಕುಮಾರ್, ನಾಗಪ್ಪ ಅಡಿವೆಪ್ಪನವರ್, ಹರೀಶ್ ನಾಯ್ಕ, ರಂಗನಾಥ್, ಹರೀಶ್ ಎಂ.ಜಿ, ಅನುಷಾ ಮತ್ತು ಚೈತ್ರಾ, ಜಿಲ್ಲಾ ಪೊಲೀಸ್ ಕಛೇರಿಯ ತಾಂತ್ರಿಕ ವಿಭಾಗದ ಸಿಬ್ಬಂದಿ ಇಂದ್ರೇಶ, ಗುರು ಮತ್ತು ವಿಜಯ, ಚಾಲಕ ಪುನೀತ್ ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಿನಿಮಾ ದಸರಾಗೆ ವೈಭವದ ಚಾಲನೆ, ನಟಿ ಕಾರುಣ್ಯ ಭರ್ಜರಿ ಡಾನ್ಸ್, ಏನಂದ್ರು ನಟ ಶರಣ್?
Money and jewels theft
LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು















