ಶಿವಮೊಗ್ಗದಲ್ಲಿ ಬಸ್‌ ಹತ್ತಿದ ಕೆಲವೇ ಕ್ಷಣದಲ್ಲಿ ಚನ್ನಗಿರಿಯ ವ್ಯಕ್ತಿಗೆ ಕಾದಿತ್ತು ಶಾಕ್‌, ಆಗಿದ್ದೇನು?

ಶಿವಮೊಗ್ಗ: ನಗರದ KSRTC ಬಸ್‌ ನಿಲ್ದಾಣದಲ್ಲಿ ಕಳ್ಳರ ಹಾವಳಿ ಮುಂದುವರೆದಿದೆ. ಬಸ್‌ ಹತ್ತುವಾಗ ವ್ಯಕ್ತಿಯೊಬ್ಬರ ಜೇಬಿನಲ್ಲಿದ್ದ ಹಣ ಲಪಟಾಯಿಸಿದ್ದಾರೆ.

ಚನ್ನಗಿರಿಯ ನಾಗರಾಜ್‌ ಎಂಬುವವರು ಶಿವಮೊಗ್ಗದ ನಂಜಪ್ಪ ಲೈಫ್‌ ಕೇರ್‌ ಆಸ್ಪತ್ರೆಯಲ್ಲಿ ತಮ್ಮ ತಾಯಿಯನ್ನು ಚಿಕಿತ್ಸೆಗೆ ಕರೆತಂದಿದ್ದರು. ಸಂಜೆ ಊರಿಗೆ ಮರಳಲು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ಆಗಮಿಸಿದ್ದರು. ಬಸ್‌ ಹತ್ತುವಾಗ ರಶ್‌ ಇತ್ತು. ಬಸ್‌ ಹತ್ತಿದ ಮೇಲೆ ಜೇಬಿಗೆ ಕೈ ಹಾಕಿದಾಗ ಅದರಲ್ಲಿದ್ದ ₹34,000 ಹಣ ನಾಪತ್ತೆಯಾಗಿತ್ತು ಎಂದು ಆರೋಪಿಸಿದ್ದಾರೆ.

ಎಲ್ಲೆಡೆ ಹುಡುಕಿದ ನಾಗರಾಜ್‌ ಅವರು ಕೊನೆಗೆ ದೂರು ನೀಡಿದ್ದಾರೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

JNNCE-Admission-Advt-scaled

ಇದನ್ನೂ ಓದಿ » ಫ್ಯಾನಿಗೆ ನೇಣು ಬಿಗಿದುಕೊಳ್ಳಲು ರೆಡಿಯಾಗಿದ್ದ ವ್ಯಕ್ತಿ, ಅಷ್ಟರಲ್ಲಿ ಮನೆಗೆ ಬಂದರು ಪೊಲೀಸ್‌, ಆಗಿದ್ದೇನು?

KSRTC

KSRTC-Bus-General-Image

Leave a Comment