ಶಿವಮೊಗ್ಗದಲ್ಲಿ 1.50 ಲಕ್ಷ ರೂ. ಜೊತೆ ಪರಾರಿಯಾಗಿದ್ದಾತ ಅರೆಸ್ಟ್‌, ಏನಿದು ಕೇಸ್?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 14 JULY 2024

SHIMOGA : ಟ್ರಾನ್ಸ್‌ಪೋರ್ಟ್‌ ಕಚೇರಿ ಮುಂಭಾಗ ನಿಲ್ಲಿಸಿದ್ದ ವಾಹನದ ಡ್ಯಾಶ್‌ ಬೋರ್ಡ್‌ನಲ್ಲಿ ಹಣ (Money) ಕಳ್ಳತನ ಮಾಡಿದ್ದ ಆರೋಪಿಯನ್ನು ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೊಸಮನೆ ಬಡಾವಣೆಯ ನರಸಿಂಹಮೂರ್ತಿ ಬಂಧಿತ.

ಕಳ್ಳತನ ಆಗಿದ್ದು ಹೇಗೆ?

ಕೋಣಂದೂರಿನ ತಿಮ್ಮಪ್ಪ ಎಂಬುವವರು ಗೂಡ್ಸ್‌ ವಾಹನದಲ್ಲಿ ಶಿವಮೊಗ್ಗದಿಂದ ಕೋಣಂದೂರಿಗೆ ಪಾರ್ಸಲ್‌ ಕೊಂಡೊಯ್ಯುವ ವ್ಯವಹಾರ ನಡೆಸುತ್ತಿದ್ದಾರೆ. ಮೇ 9ರಂದು ಸವಾರ್‌ಲೈನ್‌ ರಸ್ತೆಯ ವಿಆರ್‌ಎಲ್‌ ಸಂಸ್ಥೆಯಲ್ಲಿ ಪಾರ್ಸಲ್‌ ಕೊಂಡೊಯ್ಯಲು ಬಂದಿದ್ದರು. ಈ ಸಂದರ್ಭ ನರಸಿಂಹಮೂರ್ತಿ ಎಂಬಾತ ಸಿಕ್ಕಿದ್ದು, ಆತನೊಂದಿಗೆ ಮಾತನಾಡಿದ್ದಾರೆ. ತಿಮ್ಮಪ್ಪ ವಿಆರ್‌ಎಲ್‌ ಕಚೇರಿ ಒಳ ಹೋದಾಗ ನರಸಿಂಹಮೂರ್ತಿ ವಾಹನದ ಡ್ಯಾಶ್‌ ಬೋರ್ಡ್‌ನಲ್ಲಿದ್ದ 1.50 ಲಕ್ಷ ರೂ. ಹಣ ಕಳ್ಳತನ ಮಾಡಿದ್ದ. ಸಿಸಿಟಿವಿ ಪರಿಶೀಲಿಸಿದಾಗ ನರಸಿಂಹಮೂರ್ತಿ ಕಳವು ಮಾಡಿರುವುದು ಗೊತ್ತಾಗಿತ್ತು.

Doddapete Police Station

ಆರೋಪಿ ಅರೆಸ್ಟ್‌, ಹಣ ಸೀಜ್‌

ದೊಡ್ಡಪೇಟೆ ಠಾಣೆ ಇನ್ಸ್‌ಪೆಕ್ಟರ್‌ ರವಿ ಪಾಟೀಲ್‌ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ಪಿಎಸ್‌ಐ ನಾಗರಾಜ್‌, ಸಿಬ್ಬಂದಿ ಪಾಲಾಕ್ಷ ನಾಯ್ಕ, ನಾಗರಾಜ್, ಪಾಲಾಕ್ಷ ನಾಯ್ಕ, ಲಚ್ಚಾನಾಯ್ಕ್, ಚಂದ್ರನಾಯ್ಕ, ಗುರುನಾಯ್ಕ, ನಿತಿನ್, ಪುನೀತ್‌ ರಾವ್‌ ಮತ್ತು ಪ್ರಕಾಶ್‌ ಅವರನ್ನು ಒಳಗೊಂಡ ತಂಡ ಆರೋಪಿ ನರಸಿಂಹಮೂರ್ತಿಯನ್ನು ಬಂಧಿಸಿದೆ. ಆತನಿಂದ 1.30 ಲಕ್ಷ ರೂ. ಹಣ ವಶಕ್ಕೆ ಪಡೆಯಲಾಗಿದೆ. ‌

ಇದನ್ನೂ ಓದಿ ⇓

ಶಿವಮೊಗ್ಗ KSRTC ನಿಲ್ದಾಣದಲ್ಲಿ ಕಳ್ಳತನ ಕೇಸ್‌, ಭದ್ರಾವತಿಯ 5 ಮಹಿಳೆಯರು ಅರೆಸ್ಟ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 14, 2024

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

Leave a Comment