ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 3 FEBRUARY 2024
SHIKARIPURA : ದೂರು ನೀಡಿದ ನಾಲ್ಕೇ ಗಂಟೆಯಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿ ಆತನಿಂದ ಎರಡು ಲಕ್ಷ ರೂ. ನಗದು ವಶಪಡಿಸಿಕೊಂಡಿದ್ದಾರೆ. ಬಾಳೆಕೊಪ್ಪ ಗ್ರಾಮದ ಹನುಮಂತ ನಾಯ್ಕ ಎಂಬುವವರ ಮನೆಯಲ್ಲಿ ಕಳ್ಳತನವಾಗಿತ್ತು.
ಹನುಮಂತ ನಾಯ್ಕ ಅವರ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಘಟನೆ ಸಂಭವಿಸಿತ್ತು. ಮನೆ ಬಾಗಿಲಿನ ಬೀಗ ಹಾಕಿ ಅದನ್ನು ಬಾಗಿಲಿನ ಬಳಿ ಇರಿಸಿದ್ದರು. ಅದೇ ಬೀಗ ಬಳಸಿ ಮನೆಯೊಳಗೆ ಹೋಗಿದ್ದ ಯುವಕ 2,05,000 ರೂ. ನಗದು ಕಳವು ಮಾಡಿ ಯುವಕ ತಲೆಮರೆಸಿಕೊಂಡಿದ್ದ. ಸಿಸಿಟಿವಿ ಪರಿಶೀಲಿಸಿದಾಗ ತಮ್ಮೂರಿಗೆ ಆಗಾಗ ಬರುತ್ತಿದ್ದ ಚನ್ನಗಿರಿ ಮೂಲದ ಕಾಲೇಜು ವಿದ್ಯಾರ್ಥಿ ಎಂದು ಗೊತ್ತಾಗಿದೆ.
ಈ ಬಗ್ಗೆ ದೂರು ಬಂದ ಹಿನ್ನೆಲೆ ಶಿಕಾರಿಪುರ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ದೂರು ದಾಖಲಾದ ಕೇವಲ 4 ಗಂಟೆಯ ಒಳಗಾಗಿ ಆರೋಪಿಯ ಬಂಧನವಾಗಿದೆ. ಐಫೋನ್ ಖರೀದಿಗಾಗಿ ಕಳ್ಳತನ ಮಾಡಿದ್ದಾಗಿ ವಿಚಾರಣೆ ವೇಳೆ ಹೇಳಿದ್ದಾನೆ ಎಂದು ತಿಳಿದು ಬಂದಿದೆ. ಇನ್ಸ್‌ಪೆಕ್ಟರ್ ಆರ್.ಆರ್ ಪಾಟೀಲ್ ನೇತೃತ್ವದಲ್ಲಿ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ – 25 ವರ್ಷದ ಯುವಕನಿಗೆ 20 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ. ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422