ಐಫೋನ್‌ ಖರೀದಿಗೆ ಲಕ್ಷ ಲಕ್ಷ ರೂ. ಹಣ ಕದ್ದಿದ್ದ ವಿದ್ಯಾರ್ಥಿ ನಾಲ್ಕೇ ಗಂಟೆಯಲ್ಲಿ ಅರೆಸ್ಟ್‌, ಸಿಕ್ಕಿಬಿದ್ದಿದ್ದು ಹೇಗೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 3 FEBRUARY 2024

SHIKARIPURA : ದೂರು ನೀಡಿದ ನಾಲ್ಕೇ ಗಂಟೆಯಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿ ಆತನಿಂದ ಎರಡು ಲಕ್ಷ ರೂ. ನಗದು ವಶಪಡಿಸಿಕೊಂಡಿದ್ದಾರೆ. ಬಾಳೆಕೊಪ್ಪ ಗ್ರಾಮದ ಹನುಮಂತ ನಾಯ್ಕ ಎಂಬುವವರ ಮನೆಯಲ್ಲಿ ಕಳ್ಳತನವಾಗಿತ್ತು.

ಹನುಮಂತ ನಾಯ್ಕ ಅವರ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಘಟನೆ ಸಂಭವಿಸಿತ್ತು. ಮನೆ ಬಾಗಿಲಿನ ಬೀಗ ಹಾಕಿ ಅದನ್ನು ಬಾಗಿಲಿನ ಬಳಿ ಇರಿಸಿದ್ದರು. ಅದೇ ಬೀಗ ಬಳಸಿ ಮನೆಯೊಳಗೆ ಹೋಗಿದ್ದ ಯುವಕ 2,05,000 ರೂ. ನಗದು ಕಳವು ಮಾಡಿ ಯುವಕ ತಲೆಮರೆಸಿಕೊಂಡಿದ್ದ. ಸಿಸಿಟಿವಿ ಪರಿಶೀಲಿಸಿದಾಗ ತಮ್ಮೂರಿಗೆ ಆಗಾಗ ಬರುತ್ತಿದ್ದ  ಚನ್ನಗಿರಿ ಮೂಲದ ಕಾಲೇಜು ವಿದ್ಯಾರ್ಥಿ ಎಂದು ಗೊತ್ತಾಗಿದೆ. 

ಈ ಬಗ್ಗೆ ದೂರು ಬಂದ ಹಿನ್ನೆಲೆ ಶಿಕಾರಿಪುರ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ದೂರು ದಾಖಲಾದ ಕೇವಲ 4 ಗಂಟೆಯ ಒಳಗಾಗಿ ಆರೋಪಿಯ ಬಂಧನವಾಗಿದೆ. ಐಫೋನ್ ಖರೀದಿಗಾಗಿ ಕಳ್ಳತನ ಮಾಡಿದ್ದಾಗಿ ವಿಚಾರಣೆ ವೇಳೆ ಹೇಳಿದ್ದಾನೆ ಎಂದು ತಿಳಿದು ಬಂದಿದೆ. ಇನ್ಸ್‌ಪೆಕ್ಟರ್‌ ಆರ್.ಆರ್ ಪಾಟೀಲ್‌ ನೇತೃತ್ವದಲ್ಲಿ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ – 25 ವರ್ಷದ ಯುವಕನಿಗೆ 20 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ. ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment