ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಎನ್.ಆರ್.ಪುರಕ್ಕೆ ತೆರಳಲು ಶಿವಮೊಗ್ಗದಲ್ಲಿ KSRTC ಬಸ್ ಹತ್ತುವಾಗ ಮಹಿಳೆಯ ವ್ಯಾನಿಟಿ ಬ್ಯಾಗ್ನಲ್ಲಿದ್ದ ಹಣ ಕಳ್ಳತನವಾಗಿದೆ. ₹1.75 ಲಕ್ಷ ಕಳ್ಳತನವಾಗಿದೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಕಡೂರಿನ ಪಾಲಾಕ್ಷಮ್ಮ ಎಂಬುವವರು ಎನ್.ಆರ್.ಪುರದಲ್ಲಿರುವ ಮಗಳ ಮನೆಗೆ ತೆರಳುತ್ತಿದ್ದರು. ಮಗಳಿಗೆ ಕೊಡಲು ₹1.75 ಲಕ್ಷ ರೂ. ಹಣವನ್ನು ಬ್ಯಾಂಕಿನಿಂದ ಬಿಡಿಸಿಕೊಂಡು ಬಂದಿದ್ದರು. ಶಿವಮೊಗ್ಗದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಶೃಂಗೇರಿಗೆ ತೆರಳುವ ಬಸ್ ಹತ್ತಿದ್ದರು.
ಸೀಟಿನಲ್ಲಿ ಕುಳಿತ ಪಾಲಾಕ್ಷಮ್ಮ ವ್ಯಾನಿಟಿ ಬ್ಯಾಗ್ ಮುಟಿದ್ದಾಗ ಅನುಮಾನ ಬಂದಿದೆ. ಪರಿಶೀಲಿಸಿದಾಗ ಹಣ ಇರಲಿಲ್ಲ ಎಂದು ಆರೋಪಿಸಿದ್ದಾರೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ವ್ಯಕ್ತಿಯ ಹತ್ಯೆ, ಕೆರೆ ಏರಿ ಬಳಿ ಮೃತದೇಹ ಪತ್ತೆ

LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು

















