SHIVAMOGGA LIVE NEWS | 22 MARCH 2024
ಮಾಹಿಳಾ ಪಿ.ಜಿಯಲ್ಲಿ ನೇಣು ಬಿಗಿದು ಯುವತಿ ಸಾವು
SHIMOGA : ಮಹಿಳಾ ಪಿ.ಜಿಯಲ್ಲಿ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಪಿ.ಜಿಯಲ್ಲಿ ಘಟನೆ ಸಂಭವಿಸಿದೆ. ಮಾಲಾ (26) ಮೃತ ಯುವತಿ. ಪಿ.ಜಿಯ ತನ್ನ ಕೊಠಡಿಯಲ್ಲಿ ಬಟ್ಟೆಯಿಂದ ನೇಣು ಬಿಗಿದುಕೊಂಡಿದ್ದಾಳೆ. ಮನು ಕುಮಾರ್ ಎಂಬಾತ ಕಿರುಕುಳ ನೀಡುತ್ತಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿ ಪ್ರಕರಣ ದಾಖಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕಾಶಿಪುರದಲ್ಲಿ ಪೊಲೀಸ್ ದಾಳಿ, ಓರ್ವ ಅರೆಸ್ಟ್
SHIMOGA : ಕಾಶಿಪುರದಲ್ಲಿ ಅಂಗಡಿಯೊಂದರ ಮುಂದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆ ಪೊಲೀಸರು ದಾಳಿ ನಡೆಸಿದ್ದಾರೆ. ಮಹೇಶ್ ಎಂಬಾತನನ್ನು ಬಂಧಿಸಿರುವ ಪೊಲೀಸರು, ಆತನ ಬಳಿ ಮೂಟೆಯಲ್ಲಿದ್ದ 42 ಮದ್ಯದ ಪೌಚ್ಗಳನ್ನು ವಶಕ್ಕೆ ಪಡೆಯಲಾಗಿದೆ. ಇದರ ಮೌಲ್ಯ 1598 ರೂ. ಎಂದು ಅಂದಾಜಿಸಲಾಗಿದೆ. ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಲೇಜಿನ ಕಿಟಕಿ ಮುರಿದು ಹಣ ಕಳವು
SHIMOGA : ಕಾಲೇಜಿನ ಕಚೇರಿಯ ರೂಮಿನ ಕಿಟಕಿಯ ಸರಳು ಮುರಿದು ಒಳನುಗ್ಗಿದ ಕಳ್ಳನೊಬ್ಬ 60 ಸಾವಿರ ರೂ. ನಗದು ಕಳ್ಳತನ ಮಾಡಿದ್ದಾನೆ. ಶಿವಮೊಗ್ಗದ ತ್ಯಾವರೆಚಟ್ನಹಳ್ಳಿಯ ಪೇಸ್ ಪಿಯು ಕಾಲೇಜಿನಲ್ಲಿ ಘಟನೆ ಸಂಭವಿಸಿದೆ. ಕಚೇರಿ ಒಳಗಿದ್ದ 60 ಸಾವಿರ ರೂ. ಕಳ್ಳತನವಾಗಿರುವ ಕುರಿತು ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದ ವೈದ್ಯ ಮೋಹನ್ ನಿಧನ, ಸ್ವಗೃಹದಲ್ಲಿ ಅಂತಿಮ ದರ್ಶನ