ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 DECEMBER 2020
ಕಳೆದೊಂದು ವಾರದಿಂದ ನಾಪತ್ತೆ ಆಗಿದ್ದ ತಾಯಿ, ಇಬ್ಬರು ಮಕ್ಕಳು ಹೆಣವಾಗಿ ಪತ್ತೆಯಾಗಿದ್ದಾರೆ. ಕೆರೆಯಲ್ಲಿ ಮೂವರ ಶವ ಕೊಳೆತೆ ಸ್ಥಿತಿಯಲ್ಲಿ ಸಿಕ್ಕಿವೆ.
ಭದ್ರಾವತಿ ತಾಲೂಕು ಮಲ್ಲಾಪುರ ಗ್ರಾಮದ ಮಂಜಮ್ಮ (30), ಮಕ್ಕಳಾದ ರಚನಾ, ಯಮುನಾ ಅವರ ಮೃತದೇಹ ಕರೆಯಲ್ಲಿ ಪತ್ತೆಯಾಗಿದೆ. ಮೈದೊಳಲು ಮಲ್ಲಾಪುರ ಗ್ರಾಮದ ಕೆರೆಯಲ್ಲಿ ಮೃತದೇಹಗಳು ಪತ್ತೆಯಾಗಿವೆ.
ವಾರದ ಹಿಂದೆ ಕಾಣೆಯಾಗಿದ್ದರು
ಡಿಸೆಂಬರ್ 18ರಂದು ಮಂಜಮ್ಮ ಮತ್ತು ಇಬ್ಬರು ಮಕ್ಕಳು ನಾಪತ್ತೆಯಾಗಿದ್ದರು. ಕುಟುಂಬದವರು ಇವರಿಗಾಗಿ ಹುಡುಕಾಟ ನಡೆಸಿದ್ದರು. ಡಿಸೆಂಬರ್ 21ರಂದು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಮೂವರಿಗಾಗಿ ಶೋಧ ಕಾರ್ಯ ನಡೆಸಿದ್ದರು.

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಕರೆಯಲ್ಲಿ ದುರ್ವಾಸನೆ
ಮೈದೊಳಲು ಮಲ್ಲಾಪುರ ಕೆರೆಯಲ್ಲಿ ಇವತ್ತು ದುರ್ವಾಸನೆ ಬರಲು ಆರಂಭವಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದಾಗ ಮೂವರ ಮೃತದೇಹಗಳು ಕೊಳತೆ ಸ್ಥಿತಿಯಲ್ಲಿ ಪತ್ತೆಯಾಗಿವೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಸಾವಿಗೆ ಕಾರಣವೇನು?
ಮಂಜಮ್ಮ, ಇಬ್ಬರು ಮಕ್ಕಳ ಜೊತೆಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹೊಳೆಹೊನ್ನೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

LATEST NEWS
- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

- ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

- ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

- ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು
















