ಆಗುಂಬೆ ಸಮೀಪ ಜಮೀನಿಗೆ ಬೇಲಿ ಕಟ್ಟಲು ತೆರಳಿದ್ದ ವ್ಯಕ್ತಿ ಸಾವು, ಕಾಲುವೆಯಲ್ಲಿ ಮೃತದೇಹ ಪತ್ತೆ

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 19 ಸೆಪ್ಟೆಂಬರ್ 2021

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಬೇಲಿ ಕಟ್ಟಲು ಜಮೀನಿಗೆ ತೆರಳಿದ್ದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ನಾಲೆಯಲ್ಲಿ ಮೃತದೇಹ ಪತ್ತೆಯಾಗಿದೆ.

ಆಗುಂಬೆ ಸಮೀಪದ ಕೆಂದಾಳಬೈಲು ಗ್ರಾಮ ಪಂಚಾಯತಿ ವ್ಯಾಪ್ತಿಯ ನಾಬಳ ಗ್ರಾಮದ ಪ್ರಕಾಶ್ ಮೃತ ವ್ಯಕ್ತಿ.

Shivamogga Live Promotion

ಬೇಲಿ ಕಟ್ಟಲು ಹೋಗಿದ್ದರು

ಸ್ಥಳೀಯರೊಬ್ಬರ ಜಮೀನಿನಲ್ಲಿ ಬೇಲಿ ಕಟ್ಟಲು ಪ್ರಕಾಶ್ ತೆರಳಿದ್ದರು. ತಡರಾತ್ರಿಯಾದರೂ ಮನೆಗೆ ಹಿಂತಿರುಗದ ಹಿನ್ನೆಲೆಯಲ್ಲಿ ಮನೆಯವರು ಹುಡುಕಾಟ ಆರಂಭಿಸಿದ್ದರು. ಈ ಸಂದರ್ಭ ಕಾಲುವೆಯೊಂದರಲ್ಲಿ ಪ್ರಕಾಶ್ ಮೃತದೇಹ ಪತ್ತೆಯಾಗಿದೆ.

ಅನುಮಾನಾಸ್ಪದ ರೀತಿಯಲ್ಲಿ ಪ್ರಕಾಶ್ ಮೃತದೇಹ ಸಿಕ್ಕಿದೆ. ಆಗುಂಬೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

LifeSpring%2BKan%2B02

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment