ಶಿವಮೊಗ್ಗ ಲೈವ್
ಶಿವಮೊಗ್ಗ: ಪುರಲೆ ಬಸ್ ನಿಲ್ದಾಣದ ಬಳಿ ಅನುಮಾನಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಗಾಂಜಾ ಸೇವನೆ ದೃಢವಾದ ಹಿನ್ನೆಲೆ ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. (ಈ ಸುದ್ದಿಯನ್ನು ಇನ್ನು 20 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಅಣ್ಣಾನಗರದ ಶಿವಾನಂದ (26) ಬಂಧಿತ. ಪುರಲೆ ಬಸ್ ನಿಲ್ದಾಣದ ಬಳಿ ಪೊಲೀಸರು ಗಸ್ತು ವೇಳೆ ಈತನನ್ನು ವಶಕ್ಕೆ ಪಡೆದಿದ್ದರು. ಶಿವಾನಂದನ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
