ಶಿವಮೊಗ್ಗ ಲೈವ್
ಶಿವಮೊಗ್ಗ: ನಗರದ ಹೊಸಮನೆ ಬಡಾವಣೆಯಲ್ಲಿ ಅನುಮಾನಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ದೊಡ್ಡಪೇಟೆ ಠಾಣೆ ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು. ಆತ ಗಾಂಜಾ ಸೇವಿಸಿರುಸುವುದು ದೃಢವಾದ ಹಿನ್ನೆಲೆ ಪ್ರಕರಣ ದಾಖಲು ಮಾಡಲಾಗಿದೆ. (ಈ ಸುದ್ದಿಯನ್ನು ಇನ್ನು 26 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಸುರೇಶ (39) ಬಂಧಿತ ಆರೋಪಿ. ನವೆಂಬರ್ 3ರ ರಾತ್ರಿ ಹೊಸಮನೆ 2ನೇ ಕ್ರಾಸ್ನಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದಾಗ, ಸುರೇಶ್ ಅನುಮಾನಾಸ್ಪದವಾಗಿ ನಿಂತಿದ್ದ. ವಿಚಾರಣೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವ ಅನುಮಾನ ಮೂಡಿತ್ತು. ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷಿಸಿದಾಗ ಗಾಂಜಾ ಸೇವನೆ ದೃಢವಾಗಿದೆ ಎಂದು ದೂರಿನಲ್ಲಿ ಉಲ್ಲೇಖಸಿಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
